

ಬ್ರಹ್ಮಾವರ ಜಿ.ಎಮ್ ವಿದ್ಯಾನಿಕೇತನ್ ಪಬ್ಲಿಕ್ ಸ್ಕೂಲ್ನಲ್ಲಿ ಯು.ಕೆ.ಜಿ ವಿದ್ಯಾರ್ಥಿಗಳಿಗೆ ಘಟಿಕೋತ್ಸವ ಸಮಾರಂಭವನ್ನು ಆಯೋಜಿಸಲಾಯಿತು. ಮುಖ್ಯ ಅತಿಥಿಯಾಗಿ ಉಡುಪಿಯ ಡಾ. ಎ.ವಿ ಬಾಳಿಗಾ ಮೆಮೋರಿಯಲ್ ಆಸ್ಪತ್ರೆಯ ಕೌನ್ಸಿಲರ್ ಮತ್ತು ಕಛೇರಿಯ ಆಡಳಿತಾಧಿಕಾರಿಯಾದ ಶ್ರೀಮತಿ ಸೌಜನ್ಯ ಶೆಟ್ಟಿಯವರು ಆಗಮಿಸಿದ್ದರು. ಅವರು ಮಾತನಾಡಿ, ತೇವ ಮಣ್ಣಿನಿಂದ ವಿವಿಧ ಆಕಾರಗಳನ್ನು ಮಾಡಬಹುದು, ಬಿಳಿ ಕಾಗದದಿಂದ ವಿಮಾನ, ಹೂವು ಇತ್ಯಾದಿಗಳನ್ನು ತಯಾರಿಸಬಹುದು. ಮಕ್ಕಳು ಚಿಕ್ಕ ವಯಸ್ಸಿನಲ್ಲಿ ಪೋಷಕರಿಂದ ಕಲಿಯುತ್ತಾರೆ. ಬೆಳೆದಂತೆ ಪೋಷಕರನ್ನು ಅನುಸರಿಸುತ್ತಾರೆ. ಪೋಷಕರು ಮಕ್ಕಳೊಂದಿಗೆ ಒಳ್ಳೆಯ ಸಂಬಂಧವನ್ನು ಕಾಪಾಡಿಕೊಳ್ಳಬೇಕೆಂದು ತಿಳಿಸಿ ಘಟಿಕೋತ್ಸವದ ವಿದ್ಯಾರ್ಥಿಗಳಿಗೆ ಅಭಿನಂದನೆ ತಿಳಿಸಿದರು.


ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ಪ್ರಕಾಶ್ಚಂದ್ರ ಶೆಟ್ಟಿ ಎಲ್ಲಾ ಮಕ್ಕಳ ಭವಿಷ್ಯಕ್ಕೆ ಶುಭ ಹಾರೈಸಿ ಮಾತನಾಡಿ, ಮಕ್ಕಳಿಗೆ ಶಿಕ್ಷಣ ನೀಡಲು ನಮ್ಮ ಮೇಲೆ ವಿಶ್ವಾಸವಿಟ್ಟ ಪೋಷಕರಿಗೆ ಧನ್ಯವಾದ ಸಲ್ಲಿಸಿದರು. ನಾವು ಸದಾ ಮಕ್ಕಳನ್ನು ಹೆಚ್ಚು ಹೆಚ್ಚು ಚಟುವಟಿಕೆಗಳಲ್ಲಿ ಭಾಗವಹಿಸಲು ಉತ್ತೇಜಿಸುತ್ತೇವೆ. ನಾವು ಮಕ್ಕಳನ್ನು ಪ್ರೋತ್ಸಾಹಿಸಿದರೆ, ಮಕ್ಕಳಲ್ಲಿ ಆತ್ಮವಿಶ್ವಾಸ ಬೆಳೆಯುತ್ತದೆ. ಮಕ್ಕಳನ್ನು ಪ್ರೇರೇಪಿಸಿದ ಶಿಕ್ಷಕ ವೃಂದದವರಿಗೆ ಧನ್ಯವಾದ ಸಲ್ಲಿಸಿದರು. ಸಂಸ್ಥೆಯ ಪ್ರಾಂಶುಪಾಲರಾದ ಜಾರ್ಜ್ ಕುರಿಯನ್ರವರು ಮಾತನಾಡಿ, ಮಕ್ಕಳನ್ನು ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಿಗೆ ಪ್ರೋತ್ಸಾಹಿಸಬೇಕೆಂದು ತಿಳಿಸಿ ಅಭಿನಂದನೆ ಸಲ್ಲಿಸಿದರು.
ಯು.ಕೆ.ಜಿ ವಿದ್ಯಾರ್ಥಿಗಳು ತಮ್ಮ ಅನಿಸಿಕೆಗಳನ್ನು ಮುಕ್ತವಾಗಿ ಹಂಚಿಕೊಂಡರು. ಕಾರ್ಯಕ್ರಮದಲ್ಲಿ ಸಂಸ್ಥೆಯ ಆಡಳಿತ ಮಂಡಳಿಯ ಸದಸ್ಯೆ ತಾರಾ ಪ್ರಕಾಶ್ಚಂದ್ರ ಶೆಟ್ಟಿ, ಜಿ.ಎಮ್ ಗ್ಲೋಬಲ್ ಸ್ಕೂಲ್ನ ಆಡಳಿತ ನಿರ್ದೇಶಕರಾದ ಪ್ರಣವ್ ಶೆಟ್ಟಿ, ಶ್ರೀಮಾ ಪ್ರಣವ್ ಶೆಟ್ಟಿ, ಶಿಕ್ಷಕ ವೃಂದ, ಸಿಬ್ಬಂದಿ ವರ್ಗ, ಪೋಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

























































































































