

ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಹೇರಂಜಾಲು ಶ್ರೀ ಗುಡೇ ಮಹಾಲಿಂಗೇಶ್ವರ ದೇವಸ್ಥಾನದ ಪವಿತ್ರ ಸನ್ನಿಧಿಯಲ್ಲಿ ನೂತನ ರಾಜಗೋಪುರ ಸಮರ್ಪಣೆ ಹಾಗೂ ಅತಿರುದ್ರ ಮಹಾಯಾಗ ನಡೆಯಿತು. ಪುಣ್ಯ ಮುಹೂರ್ತದ ಕಾರ್ಯಕ್ರಮದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮುಖ್ಯ ಅತಿಥಿಯಾಗಿ ಭಾಗವಹಿಸಿ, ದೇವಳದ ಧ್ವಜಸ್ಥಂಭವನ್ನು ಉದ್ಘಾಟಿಸಿದರು.


ಈ ವೇಳೆ ಡಾ| ಮಲ್ಲಿಕಾರ್ಜುನ ಮಹಾಸ್ವಾಮಿಗಳು, ಶಾಸಕರಾದ ಬಾಲಚಂದ್ರ ಜಾರಕಿಹೊಳಿ, ಮಾಜಿ ಸಚಿವ ಜಯಪ್ರಕಾಶ್ ಹೆಗ್ಡೆ, ಮಾಜಿ ಶಾಸಕರಾದ ಗೋಪಾಲ ಪೂಜಾರಿ, ಉದ್ಯಮಿ ಜಯಶೀಲ ಶೆಟ್ಟಿ, ಪದ್ಮನಾಭ, ಜಿಲ್ಲಾಧಿಕಾರಿಗಳಾದ ಸ್ವರೂಪ ಟಿ.ಕೆ, ಜಿಲ್ಲಾ ಪಂಚಾಯತ್ ಸಿಇಒ ಪ್ರತೀಕ್ ಬಾಯಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್, ಮುಖಂಡರಾದ ಕಿಶೋರ್ ಕುಮಾರ್ ಹೆಗ್ಡೆ, ವಿಜಯ್ ಶೆಟ್ಟಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

























































































































