
ಹೆಬ್ರಿ ಬಂಟರ ಸಂಘ, ಉದಯ ಕೃಷ್ಣಯ್ಯ ಶೆಟ್ಟಿ ಚಾರಿಟೇಬಲ್ ಟ್ರಸ್ಟ್, ಮಣಿಪಾಲ ಕೆಎಂಸಿ ಆಸ್ಪತ್ರೆ, ಹೆಬ್ರಿ ಸಮುದಾಯ ಆರೋಗ್ಯ ಕೇಂದ್ರ ಸೇರಿದಂತೆ 50 ಸಂಘಟನೆಗಳ ಸಂಯುಕ್ತ ಆಶ್ರಯದಲ್ಲಿ ಹೆಬ್ರಿಯ ಚಾಣಕ್ಯ ಶಿಕ್ಷಣ ಮತ್ತು ಸಾಂಸ್ಕೃತಿಕ ಪ್ರತಿಷ್ಠಾನದ ನೇತೃತ್ವದಲ್ಲಿ ಹೆಬ್ರಿ ಬಂಟರ ಭವನದಲ್ಲಿ ಬೃಹತ್ ಉಚಿತ ಆರೋಗ್ಯ ಮೇಳ ನಡೆಯಿತು. ಈ ಸಂಧರ್ಭ ಹೆಬ್ರಿ ಬಂಟರ ಸಂಘದ ಅಧ್ಯಕ್ಷ ಹರ್ಷ ಶೆಟ್ಟಿ, ಉದಯ ಕೃಷ್ಣಯ್ಯ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಉದಯಕುಮಾರ್ ಶೆಟ್ಟಿ ಮುನಿಯಾಲು, ಮತ್ತಿತರ ಗಣ್ಯರು ಉಪಸ್ಥಿತರಿದ್ದರು. ಸಾರ್ವಜನಿಕರು, ಸಮಾಜ ಬಾಂಧವರು ಈ ಉಚಿತ ಆರೋಗ್ಯ ಮೇಳದ ಸದುಪಯೋಗವನ್ನು ಪಡೆದುಕೊಂಡರು.




























































































































