
ಆತ್ಮನಿರ್ಭರ ಭಾರತವು ಕೇವಲ ಘೋಷಣೆ ಅಲ್ಲ, ಜನರ ಚಳವಳಿಯಾಗಿದೆ. ಪ್ರತಿಯೊಬ್ಬ ನಾಗರಿಕನು ಸ್ಥಳೀಯವಾಗಿ ಉತ್ಪಾದಿಸಿದ ಉತ್ಪನ್ನಗಳನ್ನು ಬಳಸುವ ಮೂಲಕ ರಾಷ್ಟ್ರ ನಿರ್ಮಾಣಕ್ಕೆ ಕೊಡುಗೆಯಾಗಬೇಕಾಗಿದೆ. ಅಭಿವೃದ್ಧಿ ಹೊಂದಿದ ಭಾರತದ ಗುರಿಯನ್ನು ಸಾಧಿಸಲು ದೇಶದೊಳಗೆ ಉತ್ಪಾದಿಸಿದ ಸರಕುಗಳನ್ನು ಹಾಗೂ ಆಹಾರ ಪದಾರ್ಥಗಳನ್ನು ಬಳಸುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ ಎಂದು ಪಡುಬಿದ್ರಿ ಬಂಟರ ಸಂಘದ ಮಾಜಿ ಅಧ್ಯಕ್ಷ ನವೀನ್ ಚಂದ್ರ ಜೆ ಶೆಟ್ಟಿ ಹೇಳಿದರು. ಅವರು ಪಡುಬಿದ್ರಿ ರೋಟರಿ ಕ್ಲಬ್ ಓಂಕಾರ್ ಕಾಸ್ಟೂಮ್ಸ್ ಮತ್ತು ಕಲಾಸಂಗಮ ಸರ್ವ ಕಾಲೇಜು ವಿದ್ಯಾರ್ಥಿ ಶಕ್ತಿ (ರಿ), ಬೆನಕ ಈವೆಂಟ್ಸ್ ಸಹಭಾಗಿತ್ವದಲ್ಲಿ ಮಾರ್ಚ್ 27ರಿಂದ ಮಾರ್ಚ್ 29 ರವರೆಗೆ ಪಡುಬಿದ್ರಿ ಬಂಟರ ಸಂಘದಲ್ಲಿ 3 ದಿನಗಳ ಕಾಲ ನಡೆಯುವ ಬೃಹತ್ ಆಹಾರ ಮತ್ತು ಸ್ವದೇಶಿ ಉತ್ಪನ್ನಗಳ ಮಾರಾಟ ಮೇಳವನ್ನು ಉದ್ಘಾಟಿಸಿ ಮಾತನಾಡಿದರು.


ಸಮಾರಂಭದ ಅಧ್ಯಕ್ಷತೆಯನ್ನು ರೋಟರಿ ಅಧ್ಯಕ್ಷ ಸುನಿಲ್ ಕುಮಾರ್ ವಹಿಸಿದ್ದರು. ಇಂದಿನ ಯುವ ಜನತೆ ಆಧುನಿಕ ಬದುಕಿಗೆ ಒಳಗೊಂಡು ಆಹಾರ ಪದ್ಧತಿಯನ್ನು ಬದಲಾಯಿಸಿ ಕೊಳ್ಳುವ ಮೂಲಕ ವಿದೇಶಿಯರ ಸರಕು ಆಹಾರ ವಸ್ತುಗಳನ್ನು ಬಳಸುತ್ತಿರುವುದು ಖೇದಕರವಾಗಿದೆ. ಆರೋಗ್ಯಕ್ಕೆ ಮಾರಕವಾದ ಆಹಾರಕ್ಕೆ ದಾಸರಾಗಿದ್ದಾರೆ. ಉತ್ತಮ ಆರೋಗ್ಯಕರವಾದ ಸ್ವದೇಶಿ ವಸ್ತುಗಳನ್ನು ಬಳಕೆ ಮಾಡುವುದರ ಜೊತೆಗೆ ಸರಕಾರ ಕೂಡ ಸ್ವದೇಶಿ ವಸ್ತುಗಳಿಗೆ ಸರಿಯಾದ ಮಾರುಕಟ್ಟೆಯನ್ನು ಒದಗಿಸಬೇಕಾಗಿದೆ ಎಂದು ಡಾ| ದೇವಿಪ್ರಸಾದ್ ಶೆಟ್ಟಿ ಬೆಳಪು ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಪಡುಬಿದ್ರಿ ಬಂಟರ ವೇಲ್ಫೇರ್ ಟ್ರಸ್ಟ್ (ರಿ) ಅಧ್ಯಕ್ಷ ಡಾ. ವೈ.ಎನ್ ಶೆಟ್ಟಿ, ಪಡುಬಿದ್ರಿ ಕಾಡಿಪಟ್ನ ಮೊಗವೀರ ಮಹಾಸಭಾ (ರಿ) ಅಧ್ಯಕ್ಷ ಅಶೋಕ್ ಸಾಲ್ಯಾನ್, ಬೆನಕ ಈವೆಂಟ್ಸ್ ನ ಆಡಳಿತ ನಿರ್ದೇಶಕರಾದ ಗಣೇಶ್ ಶೆಟ್ಟಿ ಹಾಗೂ ಭಾಸ್ಕರ್ ಪೂಜಾರಿ ಪಡುಬಿದ್ರಿ, ಓಂಕಾರ್ ಕಾಸ್ಟೂಮ್ಸ್ ಮತ್ತು ಕಲಾ ಸಂಗಮ ಆಡಳಿತ ನಿರ್ದೇಶಕಿ ಗೀತಾ ಅರುಣ್, ಪಡುಬಿದ್ರಿ ಗ್ರಾ.ಪಂ ಮಾಜಿ ಉಪಾಧ್ಯಕ್ಷೆ ಯಶೋಧ ಪಡುಬಿದ್ರಿ, ಸರ್ವ ಕಾಲೇಜು ವಿದ್ಯಾರ್ಥಿ ಶಕ್ತಿ(ರಿ) ಕರ್ನಾಟಕ ರಾಜ್ಯಾಧ್ಯಕ್ಷ ರಚನ್ ಸಾಲ್ಯಾನ್, ಪಡುಬಿದ್ರೆ ರೋಟರಿ ಕಾರ್ಯದರ್ಶಿ ಪವನ್ ಸಾಲ್ಯಾನ್ ಉಪಸ್ಥಿತರಿದ್ದರು. ರೋಟರಿ ಅಧ್ಯಕ್ಷ ಸುನಿಲ್ ಕುಮಾರ್, ಸ್ವಾಗತಿಸಿ ಪ್ರಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮ ನಿರ್ದೇಶಕ ಸಂತೋಷ್ ಪಡುಬಿದ್ರೆ ವಂದಿಸಿದರು, ಸಂತೋಷ್ ನಂಬಿಯಾರ್ ನಿರೂಪಿಸಿದರು.

























































































































