ಬ್ರಹ್ಮಾವರ ತಾಲೂಕು ಹಾವಂಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ನೂತನ ಅಧ್ಯಕ್ಷರಾಗಿ ಮುಂಬಯಿಯ ಉದ್ಯಮಿ ಮಹೇಶ್ ಭೋಜ ಶೆಟ್ಟಿ ಅವರನ್ನು ನೇಮಕಗೊಳಿಸಿ ಉಡುಪಿ ಜಿಲ್ಲಾ ಧಾರ್ಮಿಕ ಇಲಾಖೆ ಸಹಾಯಕ ಆಯುಕ್ತೆ ಟಿ.ಎನ್ ಮಂಜುಳ ಆದೇಶ ಹೊರಡಿಸಿದ್ದಾರೆ. ಮುಂದಿನ 3 ವರ್ಷಗಳ ಅವಧಿಗೆ ಅವರು ಅಧ್ಯಕ್ಷರಾಗಿ ಸೇವೆ ಸಲ್ಲಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.