
ಮೈಸೂರಿನ ಪ್ರತಿಷ್ಠಿತ ಬಂಟರ ಸಂಘದ ಬಂಟ್ಸ್ ಚಾರಿಟೇಬಲ್ ಟ್ರಸ್ಟ್ ನ ನೂತನ ಡೆಪ್ಯೂಟಿ ಮ್ಯಾನೇಜಿಂಗ್ ಟ್ರಸ್ಟಿಯಾಗಿ ಉದ್ಯಮಿ, ಸಮಾಜಸೇವಕ, ಬಂಟ್ಸ್ ನೌ ಮಾಧ್ಯಮ ಸಂಸ್ಥೆಯ ಮಹಾಪೋಷಕರಾದ ನಿಡ್ಡೋಡಿ ಚಾವಡಿಮನೆ ಡಾ| ಜಗನ್ನಾಥ ಶೆಟ್ಟಿಯವರು ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ. ಹಲವಾರು ವರ್ಷಗಳಿಂದ ಕಿನ್ನಿಗೋಳಿಯಲ್ಲಿ ಸ್ವಾಮಿ ವಿವೇಕಾನಂದ ಸೇವಾ ಟ್ರಸ್ಟ್ ಸ್ಥಾಪಿಸಿ ಸಮಾಜಪರ ಕೆಲಸಗಳನ್ನು ನಿರ್ವಹಿಸುತ್ತಾ ಬರುತ್ತಿದ್ದಾರೆ. ಅನಾರೋಗ್ಯ ಪೀಡಿತರಿಗೆ, ಬಡ ವಿದ್ಯಾರ್ಥಿಗಳ ವಿದ್ಯಾರ್ಜನೆಗೂ ಸಹಕಾರ ನೀಡುತ್ತಿದ್ದಾರೆ.



























































































































