
ಪ್ರತಿಷ್ಠಿತ ಮೈಸೂರು ಬಂಟರ ಸಂಘದ ನೂತನ ಅಧ್ಯಕ್ಷರಾಗಿ ಉದ್ಯಮಿ, ಸಮಾಜಸೇವಕ, ಬಂಟ್ಸ್ ನೌ ಮಾಧ್ಯಮ ಸಂಸ್ಥೆಯ ಮಹಾಪೋಷಕರಾದ ಕೊಳ್ಕೆಬೈಲು ಗಣೇಶ್ ನಾರಾಯಣ್ ಹೆಗ್ಡೆಯವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮೈಸೂರು ಬಂಟರ ಸಂಘ ಹಾಗೂ ಬಂಟ್ಸ್ ಚಾರಿಟೇಬಲ್ ಟ್ರಸ್ಟ್ ನಲ್ಲಿ ಹಲವಾರು ಹುದ್ದೆಗಳನ್ನು ಸಮರ್ಥವಾಗಿ ನಿಭಾಯಿಸಿ ಯಶಸ್ವೀ ಸಂಘಟಕ ಎಂದು ಪ್ರಸಿದ್ಧಿ ಪಡೆದಿದ್ದಾರೆ. ಮೈಸೂರು ಬಂಟರ ಭವನ ನಿರ್ಮಾಣವಾಗುವಲ್ಲಿ ಹಗಲಿರುಳು ಶ್ರಮಿಸಿರುವ ಹೆಗ್ಡೆಯವರು, ಅನಾರೋಗ್ಯ ಪೀಡಿತರಿಗೆ, ಬಡ ವಿದ್ಯಾರ್ಥಿಗಳ ವಿದ್ಯಾರ್ಜನೆಗೂ ಸಹಕಾರ ನೀಡುತ್ತಾ ಬರುತ್ತಿದ್ದಾರೆ.



























































































































