
ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಸನ್ಮಾನ್ಯ ಸಿದ್ದರಾಮಯ್ಯರವರು ವಿಧಾನಸೌಧ ಕಚೇರಿಯಲ್ಲಿ ಅಂತರಾಷ್ಟ್ರೀಯ ಬ್ಯಾಡ್ಮಿಂಟನ್ ಆಟಗಾರ ಕಾರ್ಕಳದ ಸಾಣೂರಿನ ಹೆಮ್ಮೆಯ ಕ್ರೀಡಾ ಪ್ರತಿಭೆ ಆಯುಷ್ ಶೆಟ್ಟಿಯವರನ್ನು ಅಭಿನಂದಿಸಿ ಶಾಲು ಹಾಕಿ ಗೌರವಿಸಿದರು. ಈ ಸಂದರ್ಭದಲ್ಲಿ ಮಾಜಿ ಸಚಿವ ಹಾಗೂ ಮಾಜಿ ಸಂಸದರಾದ ಕೆ ಜಯಪ್ರಕಾಶ್ ಹೆಗ್ಡೆ, ವಿನಯಕುಮಾರ್ ಸೊರಕೆ, ಕಾರ್ಕಳ ಕಾಂಗ್ರೆಸ್ ಮುಖಂಡರಾದ ಉದಯ ಕುಮಾರ್ ಶೆಟ್ಟಿ ಮುನಿಯಾಲು, ವಿಧಾನಪರಿಷತ್ ಸದಸ್ಯರಾದ ಗೋವಿಂದರಾಜು, ಯುವ ಮುಖಂಡ ಅಶ್ವಿತ್ ಜೈನ್, ಆಯುಶ್ ಶೆಟ್ಟಿಯವರ ತಂದೆ ರಾಮ ಪ್ರಕಾಶ್ ಶೆಟ್ಟಿ, ತಾಯಿ ಶ್ರೀಮತಿ ಶಾಲ್ಮಲಿ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.


ಆಯುಶ್ ಶೆಟ್ಟಿಯವರು ಚೀನಾದ ನಿಂಗ್ಬೋದಲ್ಲಿ ನಡೆದ ಪಂದ್ಯಾಟದಲ್ಲಿ ವಿಶ್ವದ ನಂ. 1 ಆಟಗಾರ ಕುನ್ಲಾವುತ್ ವಿಟಿಡ್ಸರ್ನ್ ಅವರನ್ನು ಭರ್ಜರಿಯಾಗಿ ಸೋಲಿಸಿ ಪೈನಲ್ ಪ್ರವೇಶಗೈದು 61 ವರ್ಷದ ಬಳಿಕ ಭಾರತಕ್ಕೆ ಬೆಳ್ಳಿ ಪದಕದ ಸಾಧನೆ ಮಾಡಿದ್ದರು.

























































































































