
ಪ್ರತಿಷ್ಠಿತ ಬಂಟರ ಸಂಘ ಬೆಂಗಳೂರು ವರ್ಷಂಪ್ರತಿ ಬಿಸು (ಯುಗಾದಿ) ಹಬ್ಬ ಆಚರಿಸಿಕೊಂಡು ಬರುತ್ತಿದ್ದು, ಈ ವರ್ಷವೂ ಏಪ್ರಿಲ್ 14 ರಂದು ಬೆಂಗಳೂರು ಬಂಟರ ಸಂಘದ ಅಧ್ಯಕ್ಷರಾದ ಸಿಎ ಅಶೋಕ್ ಶೆಟ್ಟಿಯವರ ಸಾರಥ್ಯದಲ್ಲಿ ರಾಧಾಭಾಯಿ ತಿಮ್ಮಪ್ಪ ಭಂಡಾರಿ ಸಭಾಭವನದಲ್ಲಿ ವಿಜೃಂಭಣೆಯಿಂದ ಆಚರಿಸಲ್ಪಟ್ಟಿತು. ಮುಖ್ಯ ಅತಿಥಿಯಾಗಿ ಚಾರ್ಟೆಡ್ ಗ್ರೂಪ್ ನ ಸಿಎಂಡಿ ಏರ್ಯ ಬಾಲಕೃಷ್ಣ ಹೆಗ್ಡೆ ಹಾಗೂ ಗೌರವ ಅತಿಥಿಯಾಗಿ ಕರ್ನಾಟಕ ಮಹಿಳಾ ದಕ್ಷತಾ ಸಮಿತಿ ಅಧ್ಯಕ್ಷೆ ಶ್ರೀಮತಿ ಶರಣ್ಯ ಎಸ್ ಹೆಗ್ಡೆ ಆಗಮಿಸಿದ್ದರು. ಸಭಾ ಕಾರ್ಯಕ್ರಮದಲ್ಲಿ ಕ್ರೀಡೆ ಹಾಗೂ ಸೌಂದರ್ಯ ಸ್ಪರ್ಧೆಯಲ್ಲಿ ಗಣನೀಯ ಸಾಧನೆ ಮಾಡಿದ್ದಲ್ಲದೇ, 2026 ರ ಸಾಲಿನ ಮಿಸ್ ಯೂನಿವರ್ಸ್ ಕರ್ನಾಟಕ ವಿಜೇತೆ ಕುಮಾರಿ ಲೇಖನ ಮಲ್ಲಿಕಾರ್ಜುನ ಹೆಗ್ಡೆಯವರನ್ನು ಗೌರವಿಸಿ ಸನ್ಮಾನಿಸಿದರು.




ಈ ಸಂಧರ್ಭ ಬೆಂಗಳೂರು ಬಂಟರ ಸಂಘದ ಅಧ್ಯಕ್ಷ ಸಿಎ ಅಶೋಕ್ ಶೆಟ್ಟಿ ಎಂ, ಮಹಿಳಾ ಉಪಾಧ್ಯಕ್ಷೆ ಶ್ರೀಮತಿ ಕಾಂತಿ ಶೆಟ್ಟಿ, ಗೌರವ ಪ್ರಧಾನ ಕಾರ್ಯದರ್ಶಿ ಹಾಲಾಡಿ ವಿಜಯ್ ಜೆ ಶೆಟ್ಟಿ, ಕೋಶಾಧಿಕಾರಿ ಅಶೋಕ್ ಶೆಟ್ಟಿ ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

























































































































