
ಪುಣೆ ಬಂಟರ ಸಂಘದ ದಕ್ಷಿಣ ಪ್ರಾದೇಶಿಕ ಸಮಿತಿಯ ಮಾಸಿಕ ಸಭೆಯು ಇತ್ತೀಚಿಗೆ ಹೋಟೆಲ್ ಚಂದ್ರಭಾಗ ಸಭಾಂಗಣದಲ್ಲಿ ದಕ್ಷಿಣ ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷ ಸುಧಾಕರ್ ಸಿ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ನಡೆಯಿತು. ಈ ಸಂಧರ್ಭ ಕತ್ರಾಜ್ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಂಘದ ನೂತನ ಅಧ್ಯಕ್ಷರಾಗಿ ಅಯ್ಕೆಯದ ಜಗದೀಶ್ ಬಿ ಶೆಟ್ಟಿಯವರನ್ನು ದಕ್ಷಿಣ ಪ್ರಾದೇಶಿಕ ಸಮಿತಿಯ ವತಿಯಿಂದ ಸನ್ಮಾನಿಸಲಾಯಿತು. ನಂತರ ಸುಧಾಕರ ಸಿ ಶೆಟ್ಟಿಯವರು ಮಾತನಾಡಿ, ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡು ಇದೀಗ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಂಘದ ಅಧ್ಯಕ್ಷರಾಗಿ ಆಯ್ಕೆಯಾದ ಜಗದೀಶ್ ಶೆಟ್ಟಿಯವರಿಗೆ ಪುಣೆ ಬಂಟರ ಸಂಘದ ದಕ್ಷಿಣ ಪ್ರಾದೇಶಿಕ ಸಮಿತಿಯ ಎಲ್ಲಾ ಸದಸ್ಯರು ಸಂಪೂರ್ಣ ಸಹಕಾರ ನೀಡಲಿದ್ದು, ಅವರ ಆಡಳಿತ ಅವಧಿಯಲ್ಲಿ ದೇವಸ್ಥಾನ ಅಭಿವೃದ್ಧಿ ಹೊಂದಲಿ ಎಂದು ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಸಮಿತಿಯ ಎಲ್ಲಾ ಪದಾಧಿಕಾರಿಗಳು ಮತ್ತು ಮಹಿಳಾ ಸಮಿತಿಯ ಕಾರ್ಯಾಧ್ಯಕ್ಷೆ ವಿನೋದ ಎಸ್ ಶೆಟ್ಟಿ ಮತ್ತು ಸದಸ್ಯರು ಉಪಸ್ಥಿತರಿದ್ದರು.



























































































































