
ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ) ಮಂಗಳೂರು ಇದರ 11 ನೇ ವರ್ಷದ ಪಟ್ಲ ಸಂಭ್ರಮ – 2026 ಕಾರ್ಯಕ್ರಮ ಮೇ 30 ಶನಿವಾರ ಅಡ್ಯಾರ್ ಬಳಿಯ ಅಡ್ಯಾರ್ ಗಾರ್ಡನ್ ನಲ್ಲಿ ನಡೆಯಲಿದೆ. ಯಕ್ಷಧ್ರುವ ಪಟ್ಲ ಸಂಭ್ರಮ – 2026 ಕಾರ್ಯಕ್ರಮವನ್ನು ಪಾವಂಜೆ ನಾಗವೃಜ ಕ್ಷೇತ್ರದ ಧರ್ಮಧರ್ಶಿಗಳಾದ ಡಾ| ಯಾಜಿ ನಿರಂಜನ ಭಟ್ ಉದ್ಘಾಟಿಸಲಿದ್ದಾರೆ. ಬೆಳಿಗ್ಗೆ 8.30 ರಿಂದ 9 ರ ತನಕ ಚೌಕಿ ಪೂಜೆ ಮತ್ತು ಅಬ್ಬರ ತಾಳ, 9 ರಿಂದ 11 ರ ವರೆಗೆ ಭರತ ನಾಟ್ಯ ಪ್ರದರ್ಶನ, 11 ರಿಂದ 1.30 ರ ವರೆಗೆ ಸಭಾ ಕಾರ್ಯಕ್ರಮ, ಮಧ್ಯಾಹ್ನ 1.30 ರಿಂದ 2 ರ ವರೆಗೆ ನಾಗವೃಜ ಕ್ಷೇತ್ರ ಪಾವಂಜೆಯ ಶ್ರೀ ವಾಣಿ ಶಾಲಾ ವಿದ್ಯಾರ್ಥಿಗಳಿಂದ ಯೋಗ ಪ್ರದರ್ಶನ, ಮಧ್ಯಾಹ್ನ 2ರಿಂದ 3.30 ರ ವರೆಗೆ ಮಹಿಳಾ ಯಕ್ಷಗಾನ, ಸಂಜೆ 3.30 ರಿಂದ 5 ರವರೆಗೆ ಯಕ್ಷಗಾನ ಹಾಸ್ಯ ವೈಭವ ನಡೆಯಲಿದೆ.




ಪಟ್ಲ ಫೌಂಡೇಶನ್ ಟ್ರಸ್ಟ್ ನ ಪ್ರಧಾನ ಸಂಚಾಲಕರಾದ, ಉದ್ಯಮಿ ಶಶಿಧರ ಬಿ ಶೆಟ್ಟಿ ಬರೋಡಾ ಅವರ ಮಾರ್ಗದರ್ಶನದಲ್ಲಿ 11 ನೇ ವರ್ಷದ ಪಟ್ಲ ಸಂಭ್ರಮದಲ್ಲಿ ಡಾ. ಎಂ ಮೋಹನ್ ಆಳ್ವ ಅವರಿಗೆ 2026 ರ ಯಕ್ಷಧ್ರುವ ಮಹಾಪೋಷಕ ಪ್ರಶಸ್ತಿ ನೀಡಿ ಗೌರವಿಸಲಾಗುವುದು. 2026 ರ ಸಾಲಿನ ಪಟ್ಲ ಪ್ರಶಸ್ತಿಯನ್ನು ಪೊಲ್ಯ ಲಕ್ಷ್ಮೀನಾರಾಯಣ ಶೆಟ್ಟಿ ಅವರಿಗೆ ನೀಡಲಾಗುವುದು. ಬೆಳಿಗ್ಗೆ 11 ಗಂಟೆಗೆ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತೀ ಶ್ರೀ ಪಾದರು, ಒಡಿಯೂರು ಕ್ಷೇತ್ರದ ಶ್ರೀ ಗುರುದೇವಾನಂದ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ. ಮುಂಬಯಿ ಹೇರಂಭ ಇಂಡಸ್ಟ್ರೀಸ್ ಸಂಸ್ಥೆಯ ಸಿಎಂಡಿ ಡಾ| ಸದಾಶಿವ ಶೆಟ್ಟಿ ಕನ್ಯಾನ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ. ಎಂ.ಆರ್.ಜಿ ಗ್ರೂಪ್ ನ ಸಿಎಂಡಿ ಡಾ| ಕೆ ಪ್ರಕಾಶ್ ಶೆಟ್ಟಿ ಸಮಾರಭವನ್ನು ದೀಪ ಬೆಳಗಿಸಿ ಉದ್ಘಾಟಿಸಲಿದ್ದಾರೆ. ಗೌರವಾನ್ವಿತರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ 11 ವರ್ಷಗಳಲ್ಲಿ 16 ಕೋಟಿ ಮೌಲ್ಯದ ಸೇವಾ ಕಾರ್ಯಗಳನ್ನು ನೆರವೇರಿಸಿದೆ.

























































































































