
ಸುರಗಿರಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಅತ್ತೂರು ಕೆಮ್ರಾಲ್ ಕಿಲೆಂಜೂರು ಇಲ್ಲಿನ ವಾರ್ಷಿಕ ಜಾತ್ರಾ ಮಹೋತ್ಸವದ ಸಂದರ್ಭ ದೇವಸ್ಥಾನದ ಮಹಾದ್ವಾರ ಹಾಗೂ ನವೀಕೃತಗೊಂಡ ಹವಾನಿಯಂತ್ರಿತ ಆಶಾಲತಾ ನಾರಾಯಣ ಶೆಟ್ಟಿ ಸಭಾಭವನದ ಉದ್ಘಾಟನಾ ಸಮಾರಂಭದಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಉದ್ಯಮಿ, ಬಂಟರ ಸಂಘ ಮುಂಬಯಿಯ ಮಾಜಿ ಅಧ್ಯಕ್ಷರಾದ ಡಾ. ಪದ್ಮನಾಭ ವಿ ಶೆಟ್ಟಿಯವರನ್ನು ಗೌರವಿಸಿ ಅಭಿನಂದಿಸಲಾಯಿತು. ಈ ಸಂಧರ್ಭ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, ಬಂಟರ ಸಂಘ ಮುಂಬಯಿ ಅಧ್ಯಕ್ಷ ಪ್ರವೀಣ್ ಭೋಜ ಶೆಟ್ಟಿ, ದೇವಸ್ಥಾನದ ಮೊಕ್ತೇಸರ ಅತ್ತೂರು ಬಾಳಿಕೆ ಭಂಡಾರ ಮನೆ ರಾಜೇಶ್ ಶೆಟ್ಟಿ, ಕೃಷ್ಣ ಪ್ಯಾಲೇಸ್ ನ ಸಿಎಂಡಿ ಕೃಷ್ಣ ವೈ ಶೆಟ್ಟಿ, ಕಾಂಗ್ರೆಸ್ ಮುಖಂಡ ಮಿಥುನ್ ರೈ ಮತ್ತಿತರರು ಉಪಸ್ಥಿತರಿದ್ದರು.



























































































































