

ಬಂಟರ ಯಾನೆ ನಾಡವರ ಮಾತೃ ಸಂಘ ಮಂಗಳೂರು (ರಿ) ಇಲ್ಲಿಗೆ ಪುತ್ತೂರು ತಾಲೂಕಿನಿಂದ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಪುತ್ತೂರು ತಾಲೂಕು ಬಂಟರ ಸಂಘದ ಅಧ್ಯಕ್ಷ ಕಾವು ಹೇಮನಾಥ್ ಶೆಟ್ಟಿ, ಮಾಜಿ ಅಧ್ಯಕ್ಷ ದಯಾನಂದ ರೈ ಮನವಳಿಕೆ, ಸಮಾಜಸೇವಕ ದಂಬೆಕ್ಕಾನ ಸದಾಶಿವ ರೈ, ಉದ್ಯಮಿ ಸಾಜ ರಾಧಾಕೃಷ್ಣ ಆಳ್ವ, ನೂಜಿಬೈಲ್ ಜಯಪ್ರಕಾಶ್ ರೈ, ನಿತ್ಯಾನಂದ ಶೆಟ್ಟಿ ಮನವಳಿಕೆ, ಉದ್ಯಮಿ ಪ್ರಸನ್ನ ಕುಮಾರ್ ಶೆಟ್ಟಿ ಸಾಮೆತ್ತಡ್ಕ ಹಾಗೂ ಮಹಿಳಾ ಕ್ಷೇತ್ರದಿಂದ ವತ್ಸಲಾ ಪಿ ಶೆಟ್ಟಿಯವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಪುತ್ತೂರು ತಾಲೂಕು ಬಂಟರ ಸಂಘದ ಮಾಜಿ ಅಧ್ಯಕ್ಷ ಸೀತಾರಾಮ ರೈ ಸವಣೂರು ಹಾಗೂ ರವಿಪ್ರಸಾದ್ ಶೆಟ್ಟಿ ನಾಮಪತ್ರ ಹಿಂತೆಗೆದ ಕಾರಣ ಅವಿರೋಧ ಆಯ್ಕೆ ನಡೆಯಿತು ಎಂದು ಮಾತೃ ಸಂಘದ ಪ್ರಕಟಣೆ ತಿಳಿಸಿದೆ.



























































































































