

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಮೂಲ್ಕಿ ರಾಷ್ಟ್ರೀಯ ಹೆದ್ದಾರಿ ಬಳಿ ಡಾ| ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ ಅವರ ನೇತೃತ್ವದಲ್ಲಿ ದಾನಿಗಳ ಸಹಕಾರದಿಂದ ನಿರ್ಮಾಣ ಹಂತದಲ್ಲಿರುವ ಹವಾನಿಯಂತ್ರಿತ ಸಭಾಭವನದ ಕಾಮಗಾರಿ ವೀಕ್ಷಣೆಯನ್ನು ಖ್ಯಾತ ಉದ್ಯಮಿ, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಮಹಾ ನಿರ್ದೇಶಕರಾದ ಮೆರಿಟ್ ಹಾಸ್ಪಿಟಾಲಿಟಿ ಸರ್ವಿಸಸ್ ಪ್ರೈವೇಟ್ ಲಿಮಿಟೆಡ್ ನ ಸಿಎಂಡಿ ಅಶೋಕ್ ಶೆಟ್ಟಿ ಬೆಳ್ಳಾಡಿ ಅವರು ಭೇಟಿ ನೀಡಿ ಕಾಮಗಾರಿಯ ಪರಿಶೀಲನೆ ನಡೆಸಿದರು. ನಂತರ ಒಕ್ಕೂಟದ ಪ್ರವೀಣ್ ಭೋಜ ಶೆಟ್ಟಿ ಆಡಳಿತ ಕಚೇರಿಯಲ್ಲಿ ಶ್ರೀಯುತರನ್ನು ಸ್ವಾಗತಿಸಿ ಒಕ್ಕೂಟದ ಅಧ್ಯಕ್ಷರು ಅಭಿನಂದಿಸಿದರು. ಈ ಸಂದರ್ಭ ಸಂಚಾಲಕರಾದ ಕೊಲ್ಲಾಡಿ ಬಾಲಕೃಷ್ಣ ರೈ, ಉದ್ಯಮಿ ಸುರೇಶ್ ಶೆಟ್ಟಿ ಶಿಬರೂರು, ಮೂಲ್ಕಿ ಬಂಟರ ಸಂಘದ ಅಧ್ಯಕ್ಷ ಅಶೋಕ್ ಶೆಟ್ಟಿ, ಸಿವಿಲ್ ಗುತ್ತಿಗೆದಾರ ಶಿವಪ್ರಸಾದ್ ರೈ ಉಪಸ್ಥಿತರಿದ್ದರು.



























































































































