

ಮಂಗಳೂರಿನ ಬಂಟರ ಯಾನೆ ನಾಡವರ ಮಾತೃ ಸಂಘಕ್ಕೆ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಬೆಳ್ತಂಗಡಿ ತಾಲೂಕಿನಿಂದ 4 ಮಂದಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮಾತೃ ಸಂಘದ ಬೆಳ್ತಂಗಡಿ ಸಂಚಾಲಕ ಎಂ ಜಯರಾಮ ಭಂಡಾರಿ ಧರ್ಮಸ್ಥಳ, ಸಹ ಸಂಚಾಲಕ ಕಿರಣ್ ಕುಮಾರ್ ಶೆಟ್ಟಿ, ಬೆಳ್ತಂಗಡಿ ಬಂಟರ ಸಂಘದ ನಿಕಟಪೂರ್ವ ಅಧ್ಯಕ್ಷ ಜಯರಾಮ ಶೆಟ್ಟಿ ಮುಂಡಾಡಿಗುತ್ತು, ಮಹಿಳಾ ಕ್ಷೇತ್ರದಿಂದ ಮೂಡಬಿದ್ರೆ ಮಹಾವೀರ ಕಾಲೇಜಿನ ಉಪನ್ಯಾಸಕಿ ಸುಜಾತ ಶೆಟ್ಟಿ ಪೆರಿಂಜೆಯವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮಂಗಳೂರಿನ ಬಂಟ್ಸ್ ಹಾಸ್ಟೆಲ್ ಸರ್ಕಲ್ ಬಳಿ ಇರುವ ಬಂಟರ ಯಾನೆ ನಾಡವರ ಮಾತೃ ಸಂಘ ಇದರ 2026 -29ನೇ ಅವಧಿಗೆ ಅಧ್ಯಕ್ಷರು, ಉಪಾಧ್ಯಕ್ಷರು ಸೇರಿದಂತೆ ವಿವಿಧ ಹುದ್ದೆಗಳ ಚುನಾವಣೆಯನ್ನು ಘೋಷಿಸಲಾಗಿದ್ದು, ಮೇ 1 ರಿಂದ ಮೇ 7ರವರೆಗೆ ವಿವಿಧ ಹಂತಗಳಲ್ಲಿ ಮತದಾನ ನಡೆಯಲಿದೆ. ಅಧ್ಯಕ್ಷರಾಗಿ ಈಗಾಗಲೇ ಕೆ ಅಜಿತ್ ಕುಮಾರ್ ರೈ ಮಾಲಾಡಿಯವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.



























































































































