


ಹುಬ್ಬಳ್ಳಿ ಧಾರವಾಡ ಬಂಟರ ಸಂಘದ ನಿಕಟಪೂರ್ವ ಅಧ್ಯಕ್ಷರು, ಸಮಾಜ ಸೇವಕರು, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರಾದ ಸುಗ್ಗಿ ಸುಧಾಕರ್ ಶೆಟ್ಟಿಯವರು 2026 ರ ಸಾಲಿನ ‘ಮಹಾತ್ಮ ಗಾಂಧಿ ರಾಷ್ಟ್ರೀಯ ಸದ್ಭಾವನಾ ಪ್ರಶಸ್ತಿ’ ಗೌರವಕ್ಕೆ ಪಾತ್ರರಾಗಿದ್ದಾರೆ. ಇತ್ತೀಚಿಗೆ ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರಶಸ್ತಿ ಪ್ರಧಾನ ಮಾಡಿದರು.



























































































































