
ಬಂಟರ ಯಾನೆ ನಾಡವರ ಮಾತೃ ಸಂಘದ 2026 -29 ಸಾಲಿನ ಅಧ್ಯಕ್ಷರಾಗಿ ಕೆ ಅಜಿತ್ ಕುಮಾರ್ ರೈ ಮಾಲಾಡಿ, ಉಪಾಧ್ಯಕ್ಷರಾಗಿ ಕಾವು ಹೇಮನಾಥ ಶೆಟ್ಟಿ, ಪ್ರಧಾನ ಕಾರ್ಯದರ್ಶಿಯಾಗಿ ಕರುಣಾಕರ ಶೆಟ್ಟಿ, ಕೋಶಾಧಿಕಾರಿಯಾಗಿ ಸಿಎ ರಾಮ್ ಮೋಹನ್ ರೈ ಹಾಗೂ ಜೊತೆ ಕಾರ್ಯದರ್ಶಿಯಾಗಿ ಪುಂಚಮೆ ಪದ್ಮನಾಭ ಶೆಟ್ಟಿಯವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅಧ್ಯಕ್ಷರು ಸೇರಿ 84 ಸದಸ್ಯರ ಕಾರ್ಯಕಾರಿ ಸಮಿತಿಯನ್ನು ಚುನಾವಣಾ ಆಯೋಗ ಅಧಿಕೃತವಾಗಿ ಘೋಷಿಸಿದೆ.


ಮುಖ್ಯ ಚುನಾವಣಾಧಿಕಾರಿಯಾಗಿದ್ದ ವಕೀಲ ಉಮೇಶ್ ಶೆಟ್ಟಿ ಶೆಡ್ಡೆ ಹೊಸಲಕ್ಕೆ ಅವರು ಅಧ್ಯಕ್ಷ ಹಾಗೂ ಇತರ ಪದಾಧಿಕಾರಿಗಳ ಅವಿರೋಧ ಆಯ್ಕೆಯನ್ನು ಘೋಷಿಸಿದರು. ಉಪ ಚುನಾವಣಾಧಿಕಾರಿ ವಕೀಲ ನವೀನ್ ಶೆಟ್ಟಿ ಹಾಗೂ ಚುನಾವಣಾಧಿಕಾರಿ ಸದಾಶಿವ ಶೆಟ್ಟಿಯವರು ಉಪಸ್ಥಿತರಿದ್ದರು.

























































































































