

ಕನ್ನಡ ಸಂಘ ಬಹರೈನ್ ವತಿಯಿಂದ ಸಂಘದ ಮಾಜಿ ಉಪಾಧ್ಯಕ್ಷರಾದ ದಿ. ಕರ್ಮಾರ್ ನಾಗೇಶ್ ಶೆಟ್ಟಿ ಅವರ ಸ್ಮರಣಾರ್ಥ ಶ್ರದ್ಧಾಂಜಲಿ ಸಭೆಯನ್ನು ಮೇ 20 ರಂದು ಸಂಜೆ ಕನ್ನಡ ಭವನ ಸಭಾಂಗಣದಲ್ಲಿ ಆಯೋಜಿಸಲಾಯಿತು. ಸಭೆಯಲ್ಲಿ ಕನ್ನಡ ಸಂಘ ಬಹರೈನ್ ಅಧ್ಯಕ್ಷರಾದ ಅಜಿತ್ ಬಂಗೇರ ಅವರು ದಿವಂಗತ ಕರ್ಮಾರ್ ನಾಗೇಶ್ ಶೆಟ್ಟಿ ಅವರ ಸಮಾಜಮುಖಿ ಸೇವೆ, ಸಂಘಟನಾ ನಿಷ್ಠೆ ಹಾಗೂ ಕನ್ನಡ ಸಂಘದ ಬೆಳವಣಿಗೆಯಲ್ಲಿ ನೀಡಿದ ಅಮೂಲ್ಯ ಕೊಡುಗೆಗಳನ್ನು ಸ್ಮರಿಸಿದರು.


ಈ ಸಂದರ್ಭದಲ್ಲಿ ಸಂಘದ ಮಾಜಿ ಅಧ್ಯಕ್ಷರಾದ ಪ್ರದೀಪ್ ಶೆಟ್ಟಿ, ಅಮರನಾಥ್ ರೈ, ರಾಜ್ ಕುಮಾರ್, ಹಿರಿಯ ಸದಸ್ಯರಾದ ಹಾಜಿ ಅಬ್ದುಲ್ ರಜಾಕ್, ರಮೇಶ್ ರಾಮಚಂದ್ರನ್, ಕಮಲಾಕ್ಷ ಅಮೀನ್, ಪೂರ್ಣಿಮಾ ಜಗದೀಶ, ಅಶ್ವಿನ್ ದಯಾನಂದ ಹಾಗೂ ಉಪಾಧ್ಯಕ್ಷ ನಿತಿನ್ ಶೆಟ್ಟಿ ಅವರು ದಿ. ಕರ್ಮಾರ್ ನಾಗೇಶ್ ಶೆಟ್ಟಿಯವರಿಗೆ ಭಾವಪೂರ್ಣ ನುಡಿನಮನ ಸಲ್ಲಿಸಿದರು. ಸಭೆಯ ನಿರ್ವಹಣೆಯನ್ನು ಪ್ರಧಾನ ಕಾರ್ಯದರ್ಶಿ ರಾಮಪ್ರಸಾದ್ ಅಮ್ಮೆನಡ್ಕ ಅವರು ನಡೆಸಿಕೊಟ್ಟರು. ಸಭೆಯಲ್ಲಿ ಅನೇಕ ಸದಸ್ಯರು ಭಾಗವಹಿಸಿ ದಿವಂಗತರ ಆತ್ಮಕ್ಕೆ ಶಾಂತಿ ಕೋರಿದರು ಹಾಗೂ ಕುಟುಂಬದವರಿಗೆ ಸಂತಾಪ ಸೂಚಿಸಿದರು.





























































































































