
ಬಂಟರ ಯಾನೆ ನಾಡವರ ಮಾತೃ ಸಂಘದ ಕುಂದಾಪುರ ತಾಲೂಕು ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಮುಗಿದಿದ್ದು, ನೂತನ ಸಂಚಾಲಕರಾಗಿ ಸಂಪತ್ ಕುಮಾರ್ ಶೆಟ್ಟಿ ಹಾಗೂ ಸಹ ಸಂಚಾಲಕರಾಗಿ ಡಾ| ನಿತ್ಯಾನಂದ ಶೆಟ್ಟಿ ಅಂಪಾರು ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಪತ್ ಶೆಟ್ಟಿಯವರು ಧಾರ್ಮಿಕ ಕ್ಷೇತ್ರ, ಸಾಮಾಜಿಕ ಕ್ಷೇತ್ರದ ಸಾಧಕರಾಗಿ ಗುರುತಿಸಿಕೊಂಡಿದ್ದು, ಡಾ| ನಿತ್ಯಾನಂದ ಶೆಟ್ಟಿ ಅಂಪಾರು ಅವರು ಕುಂದಾಪುರ ಯುವ ಬಂಟರ ಸಂಘದ ಸ್ಥಾಪಕಾಧ್ಯಕ್ಷರಾಗಿ ಹಲವಾರು ಜನಪರ ಕೆಲಸಗಳನ್ನು ಮಾಡಿ ಕುಂದಾಪುರ ತಾಲೂಕಿನ ಬಂಟ ಸಮಾಜದ ಪ್ರೀತಿಗೆ ಪಾತ್ರರಾಗಿದ್ದಾರೆ.






























































































































