

ಶ್ರೀ ರಾಮಾಭಿವಂದ್ಯ ಯಕ್ಷ ಸೇವಾ ಬಳಗ ಮುಂಬಯಿ ವತಿಯಿಂದ ಮುಂಬಯಿ ವಿಶ್ವವಿದ್ಯಾಲಯ ಕನ್ನಡ ವಿಭಾಗದ ಸಹಕಾರದೊಂದಿಗೆ ಪ್ರಭು ಶ್ರೀ ರಾಮಚಂದ್ರ ದೇವರ ಅವತಾರದ ಆರಂಭದಿಂದ ಶ್ರೀ ದೇವರ ನಿರ್ಯಾಣದವರೆಗಿನ ಸಂಪೂರ್ಣ ‘ಶ್ರೀರಾಮ ಚರಿತ್ರೆ – ಶ್ರೀ ರಾಮಕಥಾ ಹೃದಯಂ’ ಪುಣ್ಯಪ್ರದ 24 ಕಂತುಗಳ ಸರಣಿ ತಾಳಮದ್ದಳೆ ಕಾರ್ಯಕ್ರಮದ ಎಂಟನೆಯ ಪ್ರಸ್ತುತಿ ಶ್ರೀರಾಮ ಕಾರುಣ್ಯ ಮತ್ತು ಸನ್ಮಾನ ಕಾರ್ಯಕ್ರಮವು ಮೇ 24ರಂದು ಅಪರಾಹ್ನ 2.15 ರಿಂದ ವಿದ್ಯಾ ವಿಹಾರ್ ಪಶ್ಚಿಮದ ಗಾಂವ್ದೇವಿಯ ಅಂಬಿಕಾ ಆದಿನಾಥೇಶ್ವರ ಮಹಾಗಣಪತಿ ದೇವಸ್ಥಾನದ ಸಭಾಂಗಣದಲ್ಲಿ ನಡೆಯಲಿದೆ. ಹರಿದಾಸ ಭಟ್ ಪೆರ್ಣಂಕಿಲ ಅವರ ಶುಭಾಶೀರ್ವಾದದೊಂದಿಗೆ, ಶ್ರೀ ಅಂಬಿಕಾ ಆದಿನಾಥೇಶ್ವರ ದೇವಸ್ಥಾನ ವಿದ್ಯಾ ವಿಹಾರ್ ಇದರ ಆಡಳಿತ ಮೊಕ್ತೇಸರ ಹರಿದಾಸ ಗೋಪಾಲ ಶೆಟ್ಟಿ ಅವರ ಸಂಪೂರ್ಣ ಸಹಕಾರದೊಂದಿಗೆ ನಡೆಯಲಿರುವ ಸಮಾರಂಭದಲ್ಲಿ, ಕಳೆದ ಮೂರು ದಶಕಗಳಿಂದ ಕಲಾಸೇವೆಗೈಯುತ್ತಿರುವ ರವೀಂದ್ರ ಪೂಜಾರಿ ಉಚ್ಚಿಲ ಅವರನ್ನು ಸಪತ್ನಿಕರಾಗಿ ವೇದಮೂರ್ತಿ ಪೆರ್ಣಂಕಿಲ ಹರಿದಾಸ ಭಟ್ ಅವರ ಆಶಯದಂತೆ ಗಣ್ಯರ ಉಪಸ್ಥಿತಿಯಲ್ಲಿ ಗೌರವಿಸಲಾಗುವುದು.


ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ವೇದಮೂರ್ತಿ ಶ್ರೀ ಪೆರ್ಣಂಕಿಲ ಹರಿದಾಸ ಭಟ್ ಅವರು ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕಲಾ ಪೋಷಕರು ಮತ್ತು ಕಲಾವಿದರಾದ ಸಾಫಲ್ಯ ಸೇವಾ ಸಂಘ ಮುಂಬಯಿ ಇದರ ಅಧ್ಯಕ್ಷ ಶ್ರೀನಿವಾಸ ಸಾಫಲ್ಯ ಮತ್ತು ಬೋಂಬೆ ಬಂಟ್ಸ್ ಅಸೋಸಿಯೇಷನ್ ಇದರ ನಿಕಟಪೂರ್ವ ಅಧ್ಯಕ್ಷ ಸಿಎ ಸುರೇಂದ್ರ ಕೆ ಶೆಟ್ಟಿ ಆಗಮಿಸಲಿದ್ದಾರೆ. ಶ್ರೀ ಗಾಂವ್ದೇವಿ ಅಂಬಿಕಾ ಆದಿನಾಥೇಶ್ವರ ಮಹಾಗಣಪತಿ ದೇವಸ್ಥಾನ ವಿದ್ಯಾ ವಿಹಾರ ಇಲ್ಲಿನ ಆಡಳಿತ ಮೊಕ್ತೇಸರರಾದ ಹರಿದಾಸ ಗೋಪಾಲ ಶೆಟ್ಟಿ ಅವರ ಗೌರವ ಉಪಸ್ಥಿತಿಯಿರುವುದು. ಶ್ರೀವತ್ಸ ಹರಿದಾಸ ಭಟ್ ಇವರಿಂದ ಶ್ರೀರಾಮ ಸಂಕೀರ್ತನೆ ನಡೆಯಲಿರುವುದು. ಕಲಾಭಿಮಾನಿಗಳು, ಕಲಾ ಪೋಷಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮದ ಯಶಸ್ವಿಗೆ ಸಹಕರಿಸುವಂತೆ ಕಲಾ ಸಂಘಟಕರಾದ ವಾಸು ಶೆಟ್ಟಿ ಮಾರ್ನಾಡು ಮತ್ತು ಸುರೇಶ್ ನಂದ್ರೊಳ್ಳಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




























































































































