
ಬಂಟರ ಯಾನೆ ನಾಡವರ ಮಾತೃ ಸಂಘ(ರಿ) ಇದರ 105 ನೇ ವಾರ್ಷಿಕ ಸರ್ವ ಸದಸ್ಯರ ಸಭೆ ದಿನಾಂಕ ಮೇ 28 ರಂದು ಗುರುವಾರ ಬೆಳಿಗ್ಗೆ 10.30 ಕ್ಕೆ ಬಂಟ್ಸ್ ಹಾಸ್ಟೇಲ್ ಬಳಿ ಇರುವ ಶ್ರೀಮತಿ ಎಸ್.ಎಮ್ ಶೆಟ್ಟಿ ಸಭಾಂಗಣದಲ್ಲಿ ನಡೆಯಲಿದೆ. 2026 -29 ರ ಸಾಲಿಗೆ ನೂತನವಾಗಿ ಆಯ್ಕೆಯಾದ ಪದಾಧಿಕಾರಿಗಳ ಅಧಿಕಾರ ಸ್ವೀಕಾರ ಕಾರ್ಯಕ್ರಮವೂ ನಡೆಯಲಿದ್ದು, 2024-25 ನೇ ಸಾಲಿನ ವಾರ್ಷಿಕ ಸರ್ವ ಸದಸ್ಯರ ಸಭೆಯ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷರಾದ ಕೆ ಅಜಿತ್ ಕುಮಾರ್ ರೈ ಮಾಲಾಡಿ ವಹಿಸಲಿದ್ದಾರೆ.































































































































