
ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ ಸಂಸ್ಥಾಪಕರಾದ ತೋನ್ಸೆ ಜಯಕೃಷ್ಣ ಎ ಶೆಟ್ಟಿಯವರು ಮೇ 23 ರಂದು ಕರ್ನಾಟಕ ರಾಜ್ಯದ ಉಪ ಮುಖ್ಯಮಂತ್ರಿಗಳಾದ ಡಿ.ಕೆ ಶಿವಕುಮಾರ್ ಅವರನ್ನು ಬೆಂಗಳೂರಿನ ಅಧಿಕೃತ ನಿವಾಸದಲ್ಲಿ ಭೇಟಿಯಾಗಿ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ ಚಟುವಟಿಕೆಗಳು ಮತ್ತು ಸಮಿತಿಯ ಮುಂದಿನ ಕ್ರಮಗಳ ಬಗ್ಗೆ ಚರ್ಚಿಸಿದರು. ಡಿ.ಕೆ ಶಿವಕುಮಾರ್ ಅವರು ಸಮಿತಿಯ ಕಾರ್ಯವೈಖರಿಗೆ ಮೆಚ್ಚುಗೆ ವ್ಯಕ್ತಪಡಿಸಿ ಶ್ಲಾಘಸಿದರು.































































































































