ಬಂಟರ ಯಾನೆ ನಾಡವರ ಮಾತೃ ಸಂಘದ ಉಡುಪಿ ತಾಲೂಕು ಸಂಚಾಲಕರಾಗಿ ದಿನಕರ ಶೆಟ್ಟಿ ಹೆರ್ಗ ಅವರು ಆಯ್ಕೆಯಾಗಿದ್ದಾರೆ. ದಿನಕರ ಶೆಟ್ಟಿಯವರು ಉಡುಪಿ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿ, ಹೆರ್ಗ ವ್ಯವಸಾಯ ಸೇವಾ ಸಹಕಾರಿ ಸಂಘ ಪರ್ಕಳ ಇಲ್ಲಿನ ಅಧ್ಯಕ್ಷರಾಗಿ, ಹೆರ್ಗ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ.