
ಬಂಟರ ಯಾನೆ ನಾಡವರ ಮಾತೃ ಸಂಘದ ಪುತ್ತೂರು ತಾಲೂಕು ಸಮಿತಿಯ ನಿಕಟಪೂರ್ವ ಸಂಚಾಲಕರಾದ ನ್ಯಾಯವಾದಿ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಸದಸ್ಯ ಕುಂಬ್ರ ದುರ್ಗಾಪ್ರಸಾದ್ ರೈ ಅವರಿಗೆ ಬಂಟರ ಯಾನೆ ನಾಡವರ ಮಾತೃ ಸಂಘದ ಪುತ್ತೂರು ತಾಲೂಕು ಸಮಿತಿ ಹಾಗೂ ಪುತ್ತೂರು ತಾಲೂಕು ಬಂಟರ ಸಂಘದ ವತಿಯಿಂದ ಎಂ. ಸುಂದರರಾಮ್ ಶೆಟ್ಟಿ ಸ್ಮಾರಕ ಬಂಟರ ಭವನದಲ್ಲಿ ಚಾವಡಿ ಸಮ್ಮಾನವನ್ನು ಮಾಡಿ ಗೌರವಿಸಲಾಯಿತು. ಬಂಟರ ಯಾನೆ ನಾಡವರ ಮಾತೃ ಸಂಘದ ಉಪಾಧ್ಯಕ್ಷರಾಗಿರುವ ಪುತ್ತೂರು ತಾಲೂಕು ಬಂಟರ ಸಂಘದ ಅಧ್ಯಕ್ಷ ಕಾವು ಹೇಮನಾಥ ಶೆಟ್ಟಿ ಅವರು ಕುಂಬ್ರ ದುರ್ಗಾಪ್ರಸಾದ್ ರೈ ಅವರನ್ನು ಸನ್ಮಾನಿಸಿ ಮಾತನಾಡಿ, ದುರ್ಗಾಪ್ರಸಾದ್ ರೈಯವರು ಬಹುಮುಖ ಪ್ರತಿಭೆ ಉಳ್ಳವರು, ಸಂಘಟನಾ ಚತುರತೆಯನ್ನು ಹೊಂದಿದವರು, ನ್ಯಾಯವಾದಿಯಾಗಿ ತುಳು ಅಕಾಡೆಮಿ ಸದಸ್ಯರಾಗಿ ಹೆಸರನ್ನು ಪಡೆದಿದ್ದಾರೆ. ಇವರು ಬಂಟರ ಯಾನೆ ನಾಡವರ ಮಾತೃ ಸಂಘದ ಪುತ್ತೂರು ತಾಲೂಕು ಸಮಿತಿ ಸಂಚಾಲಕರಾಗಿ ಉತ್ತಮ ಸೇವೆಯನ್ನು ನೀಡಿದ್ದಾರೆ. ಇವರ ಸಂಘಟನಾ ಶಕ್ತಿ ನಮಗೆ ಇನ್ನೂ ಬೇಕು. ಇವರು ಮುಂದೆಯೂ ನಮ್ಮ ಜೊತೆ ಕೆಲಸವನ್ನು ಮಾಡುತ್ತಾರೆ. ಇವರ ಉತ್ತಮ ಕೆಲಸಕ್ಕೆ ನಾವೆಲ್ಲರೂ ಅಭಾರಿಯಾಗಿದ್ದೇವೆ ಎಂದು ಹೇಳಿದರು.


ಸನ್ಮಾನ ಸ್ವೀಕರಿಸಿದ ಕುಂಬ್ರ ದುರ್ಗಾಪ್ರಸಾದ್ ರೈ ಅವರು ಮಾತನಾಡಿ, ಮಾತೃ ಸಂಘದ ಪುತ್ತೂರು ತಾಲೂಕು ಸಮಿತಿಯ ಸಂಚಾಲಕನಾಗಿ ಸೇವೆ ಸಲ್ಲಿಸಲು ಅವಕಾಶ ನೀಡಿದ ಕಾವು ಹೇಮನಾಥ ಶೆಟ್ಟಿ ಮತ್ತು ಎಲ್ಲಾ ನಿರ್ದೇಶಕರುಗಳಿಗೆ ಕೃತಜ್ಞತೆಯನ್ನು ಸಲ್ಲಿಸುತ್ತೇನೆ ಎಂದರು. ಬಂಟರ ಯಾನೆ ನಾಡವರ ಮಾತೃ ಸಂಘದ ಪುತ್ತೂರು ತಾಲೂಕು ಸಮಿತಿ ಸಂಚಾಲಕ ಸಹಕಾರ ರತ್ನ ದಂಬೆಕ್ಕಾನ ಸದಾಶಿವ ರೈ, ಸಹ ಸಂಚಾಲಕ ಸಾಜ ರಾಧಾಕೃಷ್ಣ ಆಳ್ವ, ನಿರ್ದೇಶಕರುಗಳಾದ ದಯಾನಂದ ರೈ ಮನವಳಿಕೆಗುತ್ತು, ಜಯಪ್ರಕಾಶ್ ರೈ ನೂಜಿಬೈಲು, ನಿತ್ಯಾನಂದ ಶೆಟ್ಟಿ ಮನವಳಿಕೆ, ಪ್ರಸನ್ನ ಕುಮಾರ್ ಶೆಟ್ಟಿ, ವತ್ಸಲಾ ಪಿ.ಶೆಟ್ಟಿ ಹಾಗೂ ಬಂಟರ ಭವನದ ವ್ಯವಸ್ಥಾಪಕರಾದ ರವಿಚಂದ್ರ ರೈ ಕುಂಬ್ರ ಹಾಗೂ ಭಾಸ್ಕರ ರೈ ಉಪಸ್ಥಿತರಿದ್ದರು.





























































































































