
ಖ್ಯಾತ ಕವಿ ಡಾ| ಕಯ್ಯಾರ ಕಿಂಞಣ್ಣ ರೈ ಅವರ ಜನ್ಮದಿನಾಚರಣೆ ಸಂದರ್ಭದಲ್ಲಿ ನೀಡಲ್ಪಡುವ ಕಯ್ಯಾರ ಪ್ರಶಸ್ತಿಗೆ ಉದ್ಯಮಿ, ಸಮಾಜ ಸೇವಕ, ಎಟಿಎಸ್ ಸಂಸ್ಥೆಯ ಆಡಳಿತ ನಿರ್ದೇಶಕ ಡಾ| ರವಿ ಶೆಟ್ಟಿ ದೋಣಿಂಜೆ ಗುತ್ತು ಅವರು ಆಯ್ಕೆಯಾಗಿದ್ದಾರೆ. ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ, ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ ಕಾಸರಗೋಡು, ಕಲ್ಕೂರ ಪ್ರತಿಷ್ಠಾನ ಮಂಗಳೂರು ಇವರ ಸಹಯೋಗದಲ್ಲಿ ಜೂನ್ 21ರಂದು ಬೆಳಗ್ಗೆ 9ರಿಂದ ಕಯ್ಯಾರು ಕಾಮಿಲ್ ಕೊಕ್ಕೆಚಾಲು ಶಾಲಾ ವಠಾರದಲ್ಲಿ ನಡೆಯುವ ನಾಡೋಜ ಡಾ| ಕಯ್ಯಾರ ಕಿಂಞಣ್ಣ ರೈ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ.


ಹಿರಿಯ ಸಾಹಿತಿ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಪ್ರೊ.ಎಸ್.ಜಿ ಸಿದ್ದರಾಮಯ್ಯ ಅವರು ಕಾರ್ಯಕ್ರಮ ಉದ್ಘಾಟಿಸುವರು. ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ, ಮಾಜಿ ಶಾಸಕ ಸೋಮಣ್ಣ ಬೇವಿನಮರದ ಅಧ್ಯಕ್ಷತೆ ವಹಿಸುವರು. ಮಂಜೇಶ್ವರ ಶಾಸಕ ಎ.ಕೆ.ಎಂ ಅಶ್ರಫ್ ಪ್ರಶಸ್ತಿ ಪ್ರದಾನ ಮಾಡುವರು. ಇದೇ ವೇಳೆ ಕೃತಿ ಬಿಡುಗಡೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ.





























































































































