
ಬಂಟ ಸಮಾಜದ ವಿದ್ಯಾರ್ಥಿಗಳ ಸುಪ್ತ ಪ್ರತಿಭೆಗಳನ್ನು ಹೊರತರಲು ಹಾಗೂ ಅವರಿಗೆ ಸೂಕ್ತ ಅವಕಾಶಗಳನ್ನು ಒದಗಿಸಿ ಸ್ಫೂರ್ತಿ ನೀಡಲು ಕಳೆದ 18 ವರ್ಷಗಳಿಂದ ಯಶಸ್ವಿಯಾಗಿ ಮುನ್ನಡೆಯುತ್ತಿರುವ ಬಂಟ್ಸ್ ನೌ ಮಾಧ್ಯಮ ಸಂಸ್ಥೆಯು ಮೇ 16 ರಂದು 100 ಬಡ ವಿದ್ಯಾರ್ಥಿಗಳ ದತ್ತು ಸ್ವೀಕಾರ ಕಾರ್ಯಕ್ರಮ ಮಾಧ್ಯಮ ಸಂಸ್ಥೆಯ ಕಚೇರಿಯಲ್ಲಿ ನಡೆಯಲಿದೆ. ಬಡ ವಿದ್ಯಾರ್ಥಿಗಳ ಆಯ್ಕೆ ಪ್ರಕ್ರಿಯೆ ಈಗಾಗಲೇ ಪೂರ್ಣಗೊಂಡಿದ್ದು, ಶಾಲಾ ಶುಲ್ಕ, ಸಮವಸ್ತ್ರ, ಪುಸ್ತಕಗಳು ಮತ್ತು ಇತರ ಶೈಕ್ಷಣಿಕ ಸಾಮಗ್ರಿಗಳನ್ನು ದಾನಿಗಳ ಮುಖಾಂತರ ನಿಧಿ ಸಂಗ್ರಹಿಸಿ ಸಂಸ್ಥೆ ಭರಿಸಲಿವೆ. ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳ ಸಂಪೂರ್ಣ ಶೈಕ್ಷಣಿಕ ಜವಾಬ್ದಾರಿಯನ್ನು ಹೊರುವ ವ್ಯವಸ್ಥೆಯೂ ಇದೆ.































































































































