

ಪುಣೆ ಬಂಟರ ಸಂಘದ ಸಮಾಜ ಕಲ್ಯಾಣ, ಕಲ್ಪವೃಕ್ಷ, ಕ್ರೀಡಾದಾತ ಯೋಜನೆಯ ಅಶ್ರಯದಲ್ಲಿ ಅಂತರಾಷ್ಟ್ರೀಯ ಯೋಗ ದಿನದಂಗವಾಗಿ ಯೋಗ ದಿನಾಚರಣೆಯು ಜೂನ್ 21 ರಂದು ಬೆಳಿಗ್ಗೆ ಗಂಟೆ 9.00ರಿಂದ ಬಂಟರ ಭವನದ ಬ್ಯಾಂಕ್ವೇಟ್ ಹಾಲ್ ನಲ್ಲಿ ನಡೆಯಲಿದೆ. ಯೋಗ ತರಬೇತುದಾರೆ ಜ್ಯೋತಿ ಶೆಟ್ಟಿಯವರು ಯೋಗದಿಂದ ದೇಹಕ್ಕೆ ಆಗುವ ಪ್ರಯೋಜನಗಳ ಬಗ್ಗೆ ಉಪನ್ಯಾಸ ನೀಡಲಿದ್ದಾರೆ. ಪುಣೆಯ ಶೆಟ್ಟಿ ಯೋಗ ಕ್ಲಾಸ್ ನ ನಿರ್ದೇಶಕಿ ಪ್ರಮೀಳಾ ಜೆ ಶೆಟ್ಟಿಯವರು ಈ ಯೋಗ ದಿನಾಚರಣೆಯನ್ನು ನಡೆಸಿಕೊಡಲಿದ್ದಾರೆ.


ಬಂಟರ ಸಂಘ ಪುಣೆ, ಮಹಿಳಾ ವಿಭಾಗ, ಯುವ ವಿಭಾಗ ಹಾಗೂ ಪ್ರಾದೇಶಿಕ ಸಮಿತಿಗಳ ಸಂಯುಕ್ತ ಕೂಡುವಿಕೆಯಲ್ಲಿ ನಡೆಯಲಿರುವ ಈ ಯೋಗ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯ ಸಮಾಜ ಬಾಂಧವರು ಪಾಲ್ಗೊಳ್ಳುವಂತೆ ಪುಣೆ ಬಂಟರ ಸಂಘದ ಗೌರವಾಧ್ಯಕ್ಷ ಸಂತೋಷ್ ಶೆಟ್ಟಿ ಇನ್ನ ಕುರ್ಕಿಲ್ ಬೆಟ್ಟು ಬಾಳಿಕೆ, ಅಧ್ಯಕ್ಷರಾದ ಕೆ ಅಜಿತ್ ಹೆಗ್ಡೆ, ಉಪಾಧ್ಯಕ್ಷರುಗಳಾದ ವಿಶ್ವನಾಥ್ ಶೆಟ್ಟಿ, ರಾಮಕೃಷ್ಣ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಸುಧೀರ್ ಶೆಟ್ಟಿ ಕಣಂಜಾರು, ಕೋಶಾಧಿಕಾರಿ ಪ್ರಶಾಂತ್ ಶೆಟ್ಟಿ, ಕ್ರೀಡಾ ವಿಭಾಗದ ಕಾರ್ಯಾಧ್ಯಕ್ಷ ವಿವೇಕಾನಂದ ಶೆಟ್ಟಿ ಅವರ್ಸೆ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಶಮ್ಮಿ ಎ ಹೆಗ್ಡೆ, ಯುವ ವಿಭಾಗದ ಕಾರ್ಯಾಧ್ಯಕ್ಷ ಅಭಿನಂದನ್ ಶೆಟ್ಟಿ, ಸಮಿತಿ ಪದಾಧಿಕಾರಿಗಳು, ದಕ್ಷಿಣ, ಉತ್ತರ, ಪೂರ್ವ, ಪಶ್ಚಿಮ ಪ್ರಾದೇಶಿಕ ಸಮಿತಿಗಳ ಕಾರ್ಯಾಧ್ಯಕ್ಷರುಗಳು, ಮಹಿಳಾ ಕಾರ್ಯಾಧ್ಯಕ್ಷೆಯರುಗಳು ಹಾಗೂ ಸಮಿತಿ ಪದಾಧಿಕಾರಿಗಳು ವಿನಂತಿಸಿಕೊಂಡಿದ್ದಾರೆ.
ಚಿತ್ರ, ವರದಿ : ಹರೀಶ್ ಮೂಡುಬಿದಿರೆ, ಪುಣೆ





























































































































