

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ) ಮಂಗಳೂರು ಇದರ ಯಕ್ಷಧ್ರುವ ಯಕ್ಷಶಿಕ್ಷಣ ಯೋಜನೆಯಡಿ ಡಾ| ಬಿ.ಆರ್ ಅಂಬೇಡ್ಕರ್ ವಸತಿ ಶಾಲೆ ಗುರುಪುರ ಉಳಾಯಿಬೆಟ್ಟು ಶಾಲೆಯಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದ ಯಕ್ಷಗಾನ ನಾಟ್ಯ ತರಗತಿಗೆ ಚಾಲನೆ ನೀಡಲಾಯಿತು. ಯಕ್ಷಗಾನ ನಾಟ್ಯ ತರಗತಿಯನ್ನು ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಸ್ಥಾಪಕಾಧ್ಯಕ್ಷರಾದ ಪಟ್ಲ ಸತೀಶ್ ಶೆಟ್ಟಿ ಇವರು ದೀಪ ಬೆಳಗಿಸಿ ಉದ್ಘಾಟಿಸಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ ಶುಭ ಹಾರೈಸಿದರು.



ಶಾಲಾ ಪ್ರಾಚಾರ್ಯೆ ಶ್ರೀಮತಿ ಸುಮಂಗಲಾ ಸಭಾಧ್ಯಕ್ಷತೆ ವಹಿಸಿ ಶುಭ ನುಡಿಗಳನ್ನಾಡಿದರು. ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಯಕ್ಷಧ್ರುವ ಯಕ್ಷಶಿಕ್ಷಣ ಯೋಜನೆಯ ಪ್ರಧಾನ ಸಂಚಾಲಕರಾದ ಪಣಂಬೂರು ವಾಸುದೇವ ಐತಾಳ, ಪೊಳಲಿ ಕೈಕಂಬ ಘಟಕದ ಪದಾಧಿಕಾರಿಗಳಾದ ಲೋಕೇಶ್ ಭರಣಿ ಮತ್ತು ಶಾಲೆಯ ಅಧ್ಯಾಪಕ ವರ್ಗದವರು ಉಪಸ್ಥಿತರಿದ್ದರು. ಯಕ್ಷಗಾನ ಶಿಕ್ಷಕರಾದ ದೀವಿತ್ ಎಸ್.ಕೆ ಪೆರಾಡಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಈ ಸಂದರ್ಭದಲ್ಲಿ ಯಕ್ಷಗಾನ ವಿದ್ಯಾರ್ಥಿನಿ ಕು. ಪ್ರತೀಕ್ಷಾ ತನ್ನ ಅನುಭವಗಳನ್ನು ಹಂಚಿಕೊಂಡಳು. ಉದ್ಘಾಟನಾ ಕಾರ್ಯಕ್ರಮದ ತರುವಾಯ ಯಕ್ಷಗಾನ ವಿದ್ಯಾರ್ಥಿಗಳಿಂದ ಪೂರ್ವರಂಗದ ಪ್ರಾತ್ಯಕ್ಷಿಕೆಯು ನಡೆಯಿತು. ಶಾಲಾ ಅಧ್ಯಾಪಕರಾದ ಲಾಲ್ ಮೋಹನ್ ಎಸ್ ಸ್ವಾಗತಿಸಿದರು. ಉಸ್ತುವಾರಿ ಶಿಕ್ಷಕಿ ಶ್ರೀಮತಿ ನಿಶ್ಮಿತಾ ವಂದಿಸಿದರು. ಶ್ರೀಮತಿ ಅನಿತಾ ಕುಮಾರಿ ಕಾರ್ಯಕ್ರಮ ನಿರೂಪಿಸಿದರು.





























































































































