

2028ರಲ್ಲಿ ಶತಮಾನೋತ್ಸವ ಆಚರಿಸಲಿರುವ ತುಳುವ ಮಹಾಸಭೆಯ ಕೇಂದ್ರೀಯ ಸಮಿತಿಗೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ. ತುಳುವ ಮಹಾಸಭೆ ಇಂಟರ್ನ್ಯಾಷನಲ್ ಕೇಂದ್ರೀಯ ಸಮಿತಿಯ ಅಧ್ಯಕ್ಷರಾಗಿ ಡಾ. ಅವಿನ್ ಬಿ.ಆರ್ ಆಳ್ವ, ಪ್ರಧಾನ ಕಾರ್ಯದರ್ಶಿಯಾಗಿ ಅರವಿಂದ ಬೆಳ್ಚಡ ಹಾಗೂ ಪ್ರಧಾನ ಸಂಚಾಲಕರಾಗಿ ವಿಶ್ವನಾಥ ಆಚಾರ್ಯ ಪೆರ್ಡೂರು ಅವರನ್ನು ನೇಮಕ ಮಾಡಲಾಗಿದೆ. 2028ರಲ್ಲಿ ತುಳುವ ಮಹಾಸಭೆಗೆ 100 ವರ್ಷಗಳು ಪೂರ್ಣಗೊಳ್ಳಲಿರುವ ಹಿನ್ನೆಲೆಯಲ್ಲಿ, ಶತಮಾನೋತ್ಸವವನ್ನು ರಾಜ್ಯ, ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಅರ್ಥಪೂರ್ಣವಾಗಿ ಆಚರಿಸಲು ನೂತನ ಪದಾಧಿಕಾರಿಗಳ ನೇತೃತ್ವದಲ್ಲಿ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು. ತುಳುವ ಭಾಷೆಯ ಅಭಿವೃದ್ಧಿ, ಸಂವಿಧಾನಾತ್ಮಕ ಮಾನ್ಯತೆಗಾಗಿ ಪ್ರಯತ್ನ, ಸಂಶೋಧನೆ, ಸಾಂಸ್ಕೃತಿಕ ಪರಂಪರೆಯ ಸಂರಕ್ಷಣೆ ಹಾಗೂ ವಿಶ್ವದಾದ್ಯಂತ ತುಳುವ ಸಮುದಾಯವನ್ನು ಸಂಘಟಿಸುವ ಕಾರ್ಯಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಮಹಾಸಭೆ ನೂತನ ಪದಾಧಿಕಾರಿಗಳು ತಿಳಿಸಿದ್ದಾರೆ.






























































































































