

ಬಂಟರ ಸಂಘ ಬಜಪೆ ವಲಯದ ನೂತನ ಬಂಟರ ಭವನಕ್ಕೆ ಶಿಲಾನ್ಯಾಸ, ಸಾಧಕರಿಗೆ ಸನ್ಮಾನ, ಪ್ರತಿಭಾ ಪುರಸ್ಕಾರ, ವಿದ್ಯಾರ್ಥಿ ಸಹಾಯಧನ ವಿತರಣೆ ಕಾರ್ಯಕ್ರಮವು ಸಂಘದ ನಿವೇಶನ ಇರುವ ಬಜಪೆ ತಾರಿಕಂಬ್ಳ ಮುಂಡಾರಿನಲ್ಲಿ ಜುಲೈ 5ರಂದು ಬೆಳಿಗ್ಗೆ 10 ಗಂಟೆಗೆ ನಡೆಯಲಿದೆ ಎಂದು ಬಂಟರ ಸಂಘ ಬಜಪೆಯ ಅಧ್ಯಕ್ಷ ವೇಣುಗೋಪಾಲ್ ಎಲ್ ಶೆಟ್ಟಿ ಕರಂಬಾರು ಪಡುಮನೆ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಅಂದಾಜು ರೂ. 10 ಕೋಟಿಯಲ್ಲಿ ನಿರ್ಮಾಣಗೊಳ್ಳಲಿರುವ ಬಂಟರ ಭವನಕ್ಕೆ ಎಂ.ಆರ್.ಜಿ ಸಮೂಹ ಸಂಸ್ಥೆಗಳ ಸಿಎಂಡಿ ಡಾ| ಕೆ ಪ್ರಕಾಶ್ ಶೆಟ್ಟಿ ಶಿಲಾನ್ಯಾಸ ನೆರವೇರಿಸುವರು. ಶಬರಿ ಇಂಡಸ್ಟ್ರಿಯಲ್ ಕೇಟರಿಂಗ್ ಸಂಸ್ಥೆಯ ಆಡಳಿತ ನಿರ್ದೇಶಕ ಕೆ.ಕೆ ಶೆಟ್ಟಿ ದೀಪ ಪ್ರಜ್ವಲನೆ ಮಾಡಿ, ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ ಕಾರ್ಯಕ್ರಮ ಉದ್ಘಾಟಿಸುವರು. ಉದ್ಯಮಿ ಕರುಣಾಕರ ಶೆಟ್ಟಿ ಮಧ್ಯಗುತ್ತುರವರು ನೂತನ ಬಂಟರ ಭವನದ ನೀಲನಕ್ಷೆ ಬಿಡುಗಡೆ ಮಾಡುವರು. ಪುಣೆ ಬಂಟರ ಸಂಘ ಅಧ್ಯಕ್ಷ ಅಜಿತ್ ಹೆಗ್ಡೆ ಕೆಂಜಾರುಗುತ್ತು ಪ್ರತಿಭಾ ಪುರಸ್ಕಾರ ವಿತರಣೆ ನೀಡಲಿದ್ದು, ಬೆಂಗಳೂರು ಬಂಟರ ಸಂಘದ ಮಾಜಿ ಅಧ್ಯಕ್ಷ ಆರ್. ಉಪೇಂದ್ರ ಶೆಟ್ಟಿ ವಿದ್ಯಾರ್ಥಿ ಸಹಾಯಧನ ವಿತರಣೆ ಮಾಡುವರು ಎಂದರು.



ಕಟ್ಟಡಕ್ಕೆ ದೇಣಿಗೆ ನೀಡಿದ ಉದ್ಯಮಿಗಳಾದ ಹೇರಂಭ ಇಂಡಸ್ಟ್ರೀಸ್ ನ ಸಿಎಂಡಿ ಕನ್ಯಾನ ಸದಾಶಿವ ಶೆಟ್ಟಿ, ಭವಾನಿ ಗ್ರೂಪ್ ನ ಸಿಎಂಡಿ ಕುಸುಮೋದರ ಡಿ ಶೆಟ್ಟಿ, ಶಶಿ ಕೇಟರಿಂಗ್ ಪ್ರೈವೇಟ್ ಲಿಮಿಟೆಡ್ ನ ಸಿಎಂಡಿ ಶಶಿಧರ ಶೆಟ್ಟಿ ಬರೋಡ ಅವರನ್ನು ಸನ್ಮಾನಿಸಲಾಗುವುದು. ಸಂಸದ ಕ್ಯಾ. ಬ್ರಿಜೇಶ್ ಚೌಟ, ಶಾಸಕರಾದ ಉಮಾನಾಥ ಕೋಟ್ಯಾನ್, ಡಾ. ವೈ. ಭರತ್ ಶೆಟ್ಟಿ, ರಾಜೇಶ್ ನಾಯ್ಕ್, ಮಂಜುನಾಥ ಭಂಡಾರಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ ಕಾರ್ಯಕ್ರಮದಲ್ಲಿ ಭಾಗವಹಿಸುವರು ಎಂದರು. ಸಂಘದ ಪ್ರಮುಖರಾದ ಶಿವಪ್ರಸಾದ್ ರೈ, ಕುಸುಮಾಧರ ಶೆಟ್ಟಿ, ಪ್ರೀತಿ ಹರೀಶ್ ಶೆಟ್ಟಿ, ದೇವಿಪ್ರಸಾದ್ ಶೆಟ್ಟಿ, ಸುಕೇಶ್ ಶೆಟ್ಟಿ, ಅಜಿತ್ ಕುಮಾರ್ ಶೆಟ್ಟಿ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.





























































































































