ಕುಂದಾಪುರ ತಾಲೂಕು ಯುವ ಬಂಟರ ಸಂಘದ ವತಿಯಿಂದ 2026ನೇ ಸಾಲಿನ ಪ್ರತಿಭಾ ಪುರಸ್ಕಾರ ಹಾಗೂ ವಿದ್ಯಾ ದೀವಿಗೆ ಯೋಜನೆಗಳಿಗಾಗಿ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಪ್ರತಿಭಾ ಪುರಸ್ಕಾರ ಯೋಜನೆಗೆ, ಪ್ರಸ್ತುತ ಎಸ್ಎಸ್ಎಲ್ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 95% ಅಥವಾ ಅದಕ್ಕಿಂತ ಹೆಚ್ಚಿನ ಅಂಕಗಳನ್ನು ಗಳಿಸಿರುವ ಸರ್ಕಾರಿ ಹಾಗೂ ಖಾಸಗಿ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳು ನಮೂನೆ–ಬಿ (Form-B) ಮೂಲಕ ಅರ್ಜಿ ಸಲ್ಲಿಸಬಹುದು.


ವಿದ್ಯಾ ದೀವಿಗೆ ಯೋಜನೆಗೆ, ಪ್ರಸ್ತುತ 10ನೇ ತರಗತಿಯಲ್ಲಿ 60% ಕ್ಕಿಂತ ಹೆಚ್ಚಿನ ಅಂಕಗಳನ್ನು ಪಡೆದು ಸರ್ಕಾರಿ ಅಥವಾ ಸರ್ಕಾರಿ ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ನಮೂನೆ–ಸಿ (Form-C) ಮೂಲಕ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಭರ್ತಿ ಮಾಡಿದ ಅರ್ಜಿಯೊಂದಿಗೆ ಅಗತ್ಯವಿರುವ ಎಲ್ಲಾ ಮೂಲ ದಾಖಲೆಗಳನ್ನು ಪಿಡಿಎಫ್ ರೂಪದಲ್ಲಿ ಸಿದ್ಧಪಡಿಸಿ ಇ-ಮೇಲ್ ಮೂಲಕ ಕಳುಹಿಸಬೇಕು. ಇ-ಮೇಲ್: youthbunts.scholarship@gmail.com
ಪ್ರತಿಭಾ ಪುರಸ್ಕಾರ ಯೋಜನೆಗೆ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ವಿದ್ಯಾ ದೀವಿಗೆ ಯೋಜನೆಗೆ ಅರ್ಜಿ ಸಲ್ಲಿಸಲು ಅವಕಾಶ ಇರುವುದಿಲ್ಲ ಎಂದು ಸಂಘವು ಸ್ಪಷ್ಟಪಡಿಸಿದೆ. ಈ ಮಾಹಿತಿಯನ್ನು ಕುಂದಾಪುರ ಹಾಗೂ ಬೈಂದೂರು ತಾಲೂಕಿನ ಬಂಟ ಸಮುದಾಯದ ಎಲ್ಲಾ ಅರ್ಹ ವಿದ್ಯಾರ್ಥಿಗಳಿಗೆ ತಲುಪಿಸುವಂತೆ ಸಾರ್ವಜನಿಕರು ಹಾಗೂ ಸಮಾಜ ಬಾಂಧವರು ಸಹಕರಿಸುವಂತೆ ಕುಂದಾಪುರ ತಾಲೂಕು ಯುವ ಬಂಟರ ಸಂಘ ಮನವಿ ಮಾಡಿದೆ.




















































































































