ಬಂಟರ ಯಾನೆ ನಾಡವರ ಮಾತೃ ಸಂಘ, ಶ್ರೀ ಸಿದ್ಧಿ ವಿನಾಯಕ ಪ್ರತಿಷ್ಠಾನ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಆಶ್ರಯದಲ್ಲಿ ಬಂಟ್ಸ್ ಹಾಸ್ಟೆಲ್ ನಲ್ಲಿ ಸೆಪ್ಟಂಬರ್ 14 ರಿಂದ 16 ರ ವರೆಗೆ 20 ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ನಡೆಯಲಿದ್ದು, ಜುಲೈ 15 ರಂದು ಶರವು ಶ್ರೀ ರಾಧಾಕೃಷ್ಣ ದೇವಸ್ಥಾನದಲ್ಲಿ ಗಣಪತಿ ದೇವರ ವಿಗ್ರಹದ ಮುಹೂರ್ತ ಸಮಾರಂಭ ನಡೆಯಿತು. ಸಿದ್ದಿ ವಿನಾಯಕ ಪ್ರತಿಷ್ಠಾನದ ಮ್ಯಾನೇಜಿಂಗ್ ಟ್ರಸ್ಟಿ ಅಜಿತ್ ಕುಮಾರ್ ರೈ ಮಾಲಾಡಿ, ಡಾ. ಆಶಾಜ್ಯೋತಿ ರೈ ದಂಪತಿಗಳು ಪೂಜಾ ವಿಧಿವಿಧಾನಗಳಲ್ಲಿ ಭಾಗವಹಿಸಿದ್ದರು. ಬಳಿಕ ಶ್ರೀ ಶರವು ಮಹಾಗಣಪತಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲಾಯಿತು. ಶ್ರೀ ಸಿದ್ಧಿ ವಿನಾಯಕ ಪ್ರತಿಷ್ಠಾನದ ಟ್ರಸ್ಟಿಗಳಾದ ನಿಟ್ಟೆಗುತ್ತು ರವಿರಾಜ್ ಶೆಟ್ಟಿ, ಕೃಷ್ಣಪ್ರಸಾದ್ ರೈ, ಶೆಡ್ಡೆ ಮಂಜುನಾಥ ಭಂಡಾರಿ, ಬಾಲಕೃಷ್ಣ ಶೆಟ್ಟಿ ಲಾನ್ಸ್ ವೇ, ಗಣೇಶೋತ್ಸವ ಸಮಿತಿಯ ಅಧ್ಯಕ್ಷ ಜಯಶೀಲ ಅಡ್ಯಂತಾಯ ಅಡ್ಯಾರು ಗುತ್ತು, ಬಂಟರ ಯಾನೆ ನಾಡವರ ಮಾತೃ ಸಂಘದ ಪ್ರಧಾನ ಕಾರ್ಯದರ್ಶಿ ಎಂ ಕರುಣಾಕರ ಶೆಟ್ಟಿ, ಕೋಶಾಧಿಕಾರಿ ಸಿಎ ರಾಮ್ ಮೋಹನ್ ರೈ, ಉಪಾಧ್ಯಕ್ಷ ಕಾವು ಹೇಮನಾಥ ಶೆಟ್ಟಿ, ಗಣೇಶೋತ್ಸವ ಸಮಿತಿಯ ಪದಾಧಿಕಾರಿಗಳು, ವಿವಿಧ ಬಂಟರ ಸಂಘಗಳ ಅಧ್ಯಕ್ಷರು ಉಪಸ್ಥಿತರಿದ್ದರು.

ಗಣೇಶೋತ್ಸವ ಸಮಿತಿಯ ಕಚೇರಿ ಉದ್ಘಾಟನೆಯನ್ನು ಬಂಟ್ಸ್ ಹಾಸ್ಟೇಲ್ ನಲ್ಲಿರುವ ಮಾತೃ ಸಂಘದ ಕಚೇರಿ ಬಳಿ ಶ್ರೀಮತಿ ಶಶಿಕಲಾ ಸುಂದರ್ ಶೆಟ್ಟಿ, ಶಾಲಿನಿ ಎಸ್ ಶೆಟ್ಟಿ, ಸಂಗೀತಾ ಗಣೇಶ್ ಶೆಟ್ಟಿ, ಮಲ್ಲಿಕಾ ಪ್ರಸಾದ್ ಶೆಟ್ಟಿ, ಶಶಿ ಸುಭಾಷ್ ರೈ ನೆರವೇರಿಸಿದರು. ಶ್ರೀ ಗಣೇಶೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ಪಿ ಸದಾಶಿವ ಶೆಟ್ಟಿ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಬಂಟರ ಯಾನೆ ನಾಡವರ ಮಾತೃ ಸಂಘದ ಕಾರ್ಯಕಾರಿ ಸಮಿತಿ ಸದಸ್ಯ ಜಗದೀಶ್ ಶೆಟ್ಟಿ ಬಿಜೈ ವಂದಿಸಿದರು.
























































































































