ಓದಿನ ಜೊತೆ ಜೊತೆಗೆ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಲು ಎನ್.ಎಸ್.ಎಸ್. ಉತ್ತಮ ವೇದಿಕೆ, ಪದವಿ ಪೂರ್ವ ಶಿಕ್ಷಣದ ಜೊತೆಗೆ ನಿಮಗೆ ಸಿಕ್ಕಿರುವ ಈ ಅವಕಾಶ ಸದ್ಬಳಕೆ ಮಾಡಿಕೊಳ್ಳಿ ಜೀವನದ ಸಫಲತೆಗೆ ನಾಯಕತ್ವದ ಜೊತೆಗೆ ಎಲ್ಲಾ ರೀತಿಯ ಕಲೆಗಳನ್ನು ಮೈಗೂಡಿಸಿಕೊಳ್ಳಿ. ಎನ್.ಎಸ್.ಎಸ್. ಋಣಾತ್ಮಕ ಚಿಂತನೆಗಳನ್ನು ಅಳಿಸಿ ಧನಾತ್ಮಕ ಚಿಂತನೆಗಳನ್ನು ಬೆಳೆಸುತ್ತದೆ ಎಂದು ಲೇಖಕಿ ಹಾಗೂ ರಂಗಭೂಮಿ ಕಲಾವಿದೆ ಶ್ರೀಮತಿ ಪೂರ್ಣಿಮಾ ಸುರೇಶ್ ಹೇಳಿದ್ದಾರೆ.
ಇವರು ವಿದ್ಯಾನಗರದ ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ(ಎನ್.ಎಸ್.ಎಸ್.)ಯ ವಾರ್ಷಿಕ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮವನ್ನು ನೆರವೇರಿಸಿ ಮಾತನಾಡಿದರು. ಜೀವಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಶ್ರೀ ಅಭಿಷೇಕ್, ಎನ್.ಎಸ್.ಎಸ್. ವಿದ್ಯಾರ್ಥಿ ಪ್ರತಿನಿಧಿಗಳಾದ ಕುಮಾರಿ ತನ್ವಿ ಎಸ್. ಆಚಾರ್ಯ ಹಾಗೂ ಕೀರ್ತನ್ ವೇದಿಕೆಯಲ್ಲಿದ್ದರು. ವಾಣಿಜ್ಯ ವಿಭಾಗದ ಉಪನ್ಯಾಸಕರಾದ ಶ್ರೀಮತಿ ದೀಪಾ, ಕುಮಾರಿ ವಿಲ್ಮಪ್ರಿಯ, ಹಿಂದಿ ಭಾಷಾ ಉಪನ್ಯಾಸಕಿ ಶ್ರೀಮತಿ ರೂಪಾ ಶೆಟ್ಟಿ, ದೈಹಿಕ ಶಿಕ್ಷಣ ಉಪನ್ಯಾಸಕರಾದ ಶ್ರೀ ಅರುಣ್ ಕುಮಾರ್ ಉಪಸ್ಥಿತರಿದ್ದರು ಕಾಲೇಜಿನ ಉಪ ಪ್ರಾಂಶುಪಾಲ ಹಾಗೂ ಎನ್.ಎಸ್.ಎಸ್. ಕಾರ್ಯಕ್ರಮಾಧಿಕಾರಿ ರವಿ ಜಿ. ಸ್ವಾಗತಿಸಿ ಪ್ರಾಸ್ತವಿಕ ಮಾತುಗಳನ್ನಾಡಿದರು. ಆಂಗ್ಲ ಭಾಷಾ ಉಪನ್ಯಾಸಕಿ ಶ್ರೀಮತಿ ಶಮಿತಾ ನಿರೂಪಿಸಿ ವಂದಿಸಿದರು.






















































































































