ಇಂಡಿಯನ್ ರೆಡ್ ಕ್ರಾಸ್ ಸೊಸೈಟಿಯ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ ಕಿಶೋರ್ ಚಂದ್ರ ಹೆಗ್ಡೆಯವರಿಗೆ ಬೀಳ್ಕೊಡುಗೆ ಮತ್ತು ಗೌರವಾರ್ಪಣೆ ಕಾರ್ಯಕ್ರಮ ಜಿಲ್ಲಾ ರೆಡ್ ಕ್ರಾಸ್ ಸೊಸೈಟಿಯ ಕಚೇರಿ ಸಭಾಂಗಣದಲ್ಲಿ ನಡೆಯಿತು. ರೆಡ್ಕ್ರಾಸ್ ಜಿಲ್ಲಾ ಘಟಕದ ಛೇರ್ಮನ್ ಸಿಎ ಶಾಂತಾರಾಮ ಶೆಟ್ಟಿ ಮಾತನಾಡಿ, ವಿಜಯ ಬ್ಯಾಂಕ್ನ ಎಜಿಎಂ ಆಗಿ, ಖಾಯಂ ಜನತಾ ನ್ಯಾಯಾಲಯದ ಸದಸ್ಯರಾಗಿ, ಪ್ರಭಾರ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ಅನುಭವ ಹೊಂದಿದ್ದ ಕಿಶೋರ್ ಚಂದ್ರ ಹೆಗ್ಡೆ ಅವರು ಜಿಲ್ಲಾ ರೆಡ್ ಕ್ರಾಸ್ ಸೊಸೈಟಿಯ ಕಾರ್ಯದರ್ಶಿಯಾಗಿ ಸಂಸ್ಥೆಯ ಬಲವರ್ಧನೆಗೆ ಅಮೂಲ್ಯ ಕೊಡುಗೆ ನೀಡಿದ್ದಾರೆ. ಅವರ ಕಾರ್ಯ ನಿರ್ವಹಣೆ, ಬದ್ಧತೆ, ಸಮರ್ಪಿತ ಸೇವೆ ರೆಡ್ ಕ್ರಾಸ್ಗೆ ಸದಾ ಸ್ಪೂರ್ತಿದಾಯಕವಾಗಿದೆ ಎಂದರು.



ರೆಡ್ ಕ್ರಾಸ್ ಜಿಲ್ಲಾ ಘಟಕದ ಉಪಾಧ್ಯಕ್ಷ ಡಾ. ಬಿ. ಸಚ್ಚಿದಾನಂದ ರೈ, ಖಜಾಂಜಿ ಗುರುದತ್ ಎಂ ನಾಯಕ್, ನಿರ್ದೇಶಕರಾದ ಯತೀಶ್ ಬೈಕಂಪಾಡಿ, ಪಿ.ಬಿ ಹರೀಶ್ ರೈ, ಡಾ. ಸುಮನ ಬಿ., ರಾಘವೇಂದ್ರ ರಾವ್, ಸಿಬ್ಬಂದಿ ಮಲ್ಲಿಕಾ, ಅನಿತಾ, ಗಿರೀಶ್ ಕುಮಾರ್ ಉಪಸ್ಥಿತರಿದ್ದರು.




















































































































