ತಮ್ಮ ದಕ್ಷ ನಾಯಕತ್ವ ಹಾಗೂ ನಿಸ್ವಾರ್ಥ ಸಮಾಜ ಸೇವೆಯ ಮೂಲಕ ವಿಶಿಷ್ಟ ರೀತಿಯಲ್ಲಿ ಗುರುತಿಸಿಕೊಂಡಿರುವ ಶಾಲಿನಿ ಸತೀಶ್ ಶೆಟ್ಟಿ ಸಚೇರಿಗುತ್ತು ಅವರು ಪ್ರತಿಷ್ಠಿತ ‘ನಾಡಪ್ರಭು ಕೆಂಪೇಗೌಡ’ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಬೆಂಗಳೂರಿನ ನಿರ್ಮಾತೃ ನಾಡಪ್ರಭು ಕೆಂಪೇಗೌಡರ ಸ್ಮರಣಾರ್ಥ ಬೆಂಗಳೂರಿನ ಹೆಸರಾಂತ ‘ಸಮರ್ಥ ಸಾಹಿತ್ಯ ಮತ್ತು ಸಾಂಸ್ಕೃತಿಕ ಪ್ರತಿಷ್ಠಾನ’ ವತಿಯಿಂದ ಆಗಸ್ಟ್ 9 ರವಿವಾರದಂದು ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಅದ್ದೂರಿ ಪ್ರಶಸ್ತಿ ಪ್ರಧಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ. ಅಂದು ಸಂಗೀತ, ಸಾಹಿತ್ಯ, ಕಲೆ ಸಮಾಜ ಸೇವೆ ಮುಂತಾದ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿರುವ ಸುಮಾರು 30 ಅಸಮಾನ್ಯ ಕನ್ನಡಿಗರನ್ನು ಗುರುತಿಸಿ ಈ ಗೌರವವನ್ನು ನೀಡಲಾಗುತ್ತಿದೆ.






















































































































