ಉತ್ತಮ ಕಾರ್ಯ ನಿರ್ವಹಣೆಗೆ ಕೋಡಿಂಬಾಡಿ ಹಾಲು ಉತ್ಪಾದಕರ ಸಹಕಾರಿ ಸಂಘವು ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದಿಂದ ಸತತ ಎರಡನೇ ಬಾರಿಗೆ ತಾಲೂಕು ಮಟ್ಟದ ಉತ್ತಮ ಸಹಕಾರಿ ಸಂಘ ಪ್ರಶಸ್ತಿ ಪಡೆದುಕೊಂಡಿದೆ. ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ವತಿಯಿಂದ ಜುಲೈ 24 ರಂದು ತೆಂಕಿಲ ದರ್ಶನ್ ಕಲಾಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಯಿತು. ಸಂಘದ ಅಧ್ಯಕ್ಷ ಜಗನ್ನಾಥ ಶೆಟ್ಟಿ ನಡುಮನೆ ಹಾಗೂ ಕಾರ್ಯದರ್ಶಿ ರಮೇಶ್ ಕೆ ಶೆಟ್ಟಿ ಪ್ರಶಸ್ತಿ ಸ್ವೀಕರಿಸಿದರು. ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ರವಿರಾಜ ಹೆಗ್ಡೆ, ಉಪಾಧ್ಯಕ್ಷ ಉದಯ ಎಸ್ ಕೋಟ್ಯಾನ್ ಪ್ರಶಸ್ತಿ ಪ್ರದಾನ ಮಾಡಿದರು. ಎಸ್.ಬಿ ಜಯರಾಮ ರೈ ಸಹಿತ ಒಕ್ಕೂಟದ ಆಡಳಿತ ಮಂಡಳಿ ನಿರ್ದೇಶಕರು ಉಪಸ್ಥಿತರಿದ್ದರು.






















































































































