ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ (ರಿ) ಉಡುಪಿ ತಾಲೂಕು ಮಣಿಪಾಲ ವಲಯ ಮತ್ತು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ (ರಿ) ಉಡುಪಿ ಮಣಿಪಾಲ ವಲಯ ಹಾಗೂ ಪರ್ಕಳ ಪ್ರೌಢ ಶಾಲೆ ಇವರ ಸಂಯುಕ್ತ ಆಶ್ರಯದಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮವನ್ನು ಜನಜಾಗೃತಿ ವೇದಿಕೆ ಮಣಿಪಾಲ ವಲಯದ ಅಧ್ಯಕ್ಷರಾದ ವಸಂತ ಶೆಟ್ಟಿ ಚೆನ್ನಿಬೆಟ್ಟುರವರು ಉದ್ಘಾಟಿಸಿ, ಯೋಜನೆಯ ಜನಜಾಗೃತಿ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಂಜುಳಾ ವಿ ಪ್ರಸಾದ್ ಆಗಮಿಸಿ, ಆಧುನಿಕ ತಂತ್ರಜ್ಞಾನ, ಹದಿಹರೆಯದ ಯುವಕ ಯುವತಿಯರ ಸಮಸ್ಯೆಗಳು, ಮಾದಕ ವ್ಯಸನಗಳ ಬಗ್ಗೆ ಮಾಹಿತಿ ನೀಡಿದರು.



ಕಾರ್ಯಕ್ರಮದಲ್ಲಿ ತಾಲೂಕು ಜನಜಾಗೃತಿ ವೇದಿಕೆಯ ನಿಕಟಪೂರ್ವ ಅಧ್ಯಕ್ಷರಾದ ಸತ್ಯಾನಂದ ನಾಯಕ್, ರೋ. ದಿನೇಶ್ ಹೆಗ್ಡೆ ಅತ್ರಾಡಿ, ಮುಖ್ಯೋಪಾಧ್ಯಾಯರಾದ ಮನೋಹರ್ ನಾಯಕ್, ಸಾವಿತ್ರಿ ಪ್ರಭು, ಸುಜಾತ ಹಾಗೂ ಮುಖ್ಯ ಶಿಕ್ಷಕರು ಉಪಸ್ಥಿತರಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ರೋ. ಬಿ ಅರುಣಾಚಲ ಹೆಗ್ಡೆಯವರು ವಹಿಸಿದ್ದರು. ಶಾಲೆಯ 140 ವಿದ್ಯಾರ್ಥಿಗಳು ಭಾಗವಸಿದ್ದರು. ಶಾಲೆಯ ಮುಖ್ಯ ಶಿಕ್ಷಕರು ಸ್ವಾಗತಿಸಿ, ಸೇವಾ ಪ್ರತಿನಿಧಿ ಧನ್ಯವಾದ ಸಮರ್ಪಿಸಿದರು. ವಲಯ ಮೇಲ್ವಿಚಾರಕರಾದ ಬಾಲಚಂದ್ರ ಕಾರ್ಯಕ್ರಮ ನಿರ್ವಹಿಸಿದರು.




















































































































