ಬಂಟ ಸಮಾಜ ಬಲಿಷ್ಠ ಸಮಾಜವಾಗಿದ್ದು ಜಗತ್ತಿನ ಹಲವು ಭಾಗಗಳಲ್ಲಿ ವಿವಿಧ ಕ್ಷೇತ್ರಗಳಲ್ಲಿ ಬಂಟರು ಗುರುತಿಸಿಕೊಂಡಿದ್ದಾರೆ ಎಂದು ಮಾಜಿ ಸಚಿವ ಬಿ ರಮಾನಾಥ ರೈ ಅವರು ಇಂಟರ್ ನ್ಯಾಷನಲ್ ಬಂಟ್ಸ್ ವೆಲ್ಫೇರ್ ಟ್ರಸ್ಟ್ (ರಿ.) ಇದರ 8ನೇ ವಾರ್ಷಿಕೋತ್ಸವ ಸಮಾರಂಭದಂದು ಮಾತನಾಡಿದರು. ಟ್ರಸ್ಟಿನ ಸ್ಥಾಪಕಾಧ್ಯಕ್ಷ ಎ ಸದಾನಂದ ಶೆಟ್ಟಿಯವರು ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಉದ್ಯಮಿ, ಸಮಾಜಸೇವಕ ಸುರೇಶ್ ಶೆಟ್ಟಿ ಗುರ್ಮೆ ಅವರನ್ನು ಟ್ರಸ್ಟಿನ ನೂತನ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಯಿತು. ನಿತೇಶ್ ಶೆಟ್ಟಿ ಎಕ್ಕಾರ್ ಅವರನ್ನು ಯುವ ವಿಭಾಗದ ಅಧ್ಯಕ್ಷ, ದೇವಿಚರಣ್ ಶೆಟ್ಟಿ ಕಾರ್ಯಧ್ಯಕ್ಷ, ವಿಜಯಲಕ್ಷ್ಮಿ ಬಿ ಶೆಟ್ಟಿ ಮಹಿಳಾ ವಿಭಾಗದ ಅಧ್ಯಕ್ಷೆಯಾಗಿ ಅವಿರೋಧವಾಗಿ ಆಯ್ಕೆಯಾದರು. ಈ ಸಂಧರ್ಭದಲ್ಲಿ ಮಾಜಿ ಶಾಸಕಿ ಶಕುಂತಲಾ ಶೆಟ್ಟಿ, ಜಾಗತಿಕ ಬಂಟರ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, ಎ.ಜೆ ಸಮೂಹ ಶಿಕ್ಷಣ ಸಂಸ್ಥೆಯ ಆಡಳಿತ ನಿರ್ದೇಶಕ ಡಾ. ಎ.ಜೆ ಶೆಟ್ಟಿ, ಮೂಲ್ಕಿ ಬಂಟರ ಸಂಘದ ಅಧ್ಯಕ್ಷ ಪುರುಷೋತ್ತಮ ಶೆಟ್ಟಿ, ಸಂಗೀತ ನಿರ್ದೇಶಕ ಗುರುಕಿರಣ್, ಸೀತಾರಾಮ ರೈ ಸವನೂರು, ಜಯಪ್ರಕಾಶ್ ರೈ ಸುಳ್ಯ, ಸತೀಶ್ ಅಡಪ್ಪ, ರವೀಂದ್ರ ಶೆಟ್ಟಿ ಉಳಿದೊಟ್ಟು, ರಾಜ್ ಗೋಪಾಲ್ ರೈ, ಕದ್ರಿ ನವನೀತ್ ಶೆಟ್ಟಿ, ಇಂದ್ರಾಳಿ ಜಯಕರ್ ಶೆಟ್ಟಿ, ಪಿ ಆರ್ ಶೆಟ್ಟಿ, ಸುರೇಶ್ಚಂದ್ರ ಶೆಟ್ಟಿ, ವಿಜಯಲಕ್ಷ್ಮಿ ಬಿ ಶೆಟ್ಟಿ ಹಾಗೂ ಇನ್ನಿತರ ಗಣ್ಯರು ಉಪಸ್ಥಿತರಿದ್ದರು. ರಾಜಗೋಪಾಲ್ ರೈ ಸ್ವಾಗತಿಸಿದರು. ಕದ್ರಿ ನವನೀತ್ ಶೆಟ್ಟಿ ನಿರೂಪಿಸಿದರು. ಭಾಸ್ಕರ್ ರೈ ಕುಕುವಳ್ಳಿ ವಂದಿಸಿದರು.
ಗುರ್ಮೆ ಸುರೇಶ್ ಶೆಟ್ಟಿ
ನಿತೇಶ್ ಶೆಟ್ಟಿ ಎಕ್ಕಾರ್