ಉಡುಪಿ ಗ್ರಾಮೀಣ ಬಂಟರ ಸಂಘದ ವತಿಯಿಂದ ಆಟಿಡೊಂಜಿ ದಿನ ಕಾರ್ಯಕ್ರಮವು ಕುಂತಳನಗರ ಆಶಾ ಪ್ರಕಾಶ್ ಶೆಟ್ಟಿ ಕನ್ವೆನ್ಶನ್ ಹಾಲ್ ನಲ್ಲಿ ಅಧ್ಯಕ್ಷರಾದ ಡಾ. ಎಚ್.ಬಿ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಆಗಸ್ಟ್ 9ರಂದು ಬೆಳಗ್ಗೆ 10:30 ಕ್ಕೆ ನಡೆಯಲಿದೆ. ಹಿರಿಯ ನ್ಯಾಯವಾದಿ ಎಮ್ ಶಾಂತರಾಮ ಶೆಟ್ಟಿ, ಕಟೀಲು ತುಳು ವರ್ಲ್ಡ್ ಫೌಂಡೇಶನ್ ನಿರ್ದೇಶಕ ಡಾ| ರಾಜೇಶ್ ಕೃಷ್ಣ ಆಳ್ವ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ ಎಂದು ಕಾರ್ಯದರ್ಶಿ ವಿಜಿತ್ ಶೆಟ್ಟಿ, ಖಜಾಂಚಿ ರಂಜನಿ ಹೆಗ್ಡೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
























































































































