ಕರ್ನಾಟಕದ ಕರಾವಳಿ ಪ್ರದೇಶದಲ್ಲಿ ಪರಿಸರ ಸಂರಕ್ಷಣೆ, ಅಭಿವೃದ್ಧಿ, ಕೈಗಾರಿಕೆಗಳ ಉತ್ತೇಜನ, ಉದ್ಯೋಗ ಸೃಷ್ಟಿ ಹಾಗೂ ಬಡತನ ನಿರ್ಮೂಲನೆ ಸೇರಿದಂತೆ ಸಮಾಜಮುಖಿ ಕಾರ್ಯಗಳಿಗೆ ಒತ್ತು ನೀಡುತ್ತಿರುವ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ ಯುನೈಟೆಡ್ ಅರಬ್ ಎಮಿರೇಟ್ಸ್ (ಯು.ಎ.ಇ) ಓವರ್ಸೀಸ್ ಶಾಖೆಯ ವಿಶೇಷ ಸಭೆಯು ಆಗಸ್ಟ್ 13ರಂದು ದುಬೈನ ಬರ್ ದುಬಾಯಿ ಖಾಲಿದ್ ಬಿನ್ ಅಲ್ ವಲೀದ್ ರಸ್ತೆಯ ಫಾರ್ಚೂನ್ ಆಟ್ರಿಯಂ ಹೋಟೆಲ್ ನಲ್ಲಿ ನಡೆಯಲಿದೆ. ಸಭೆಯ ಅಧ್ಯಕ್ಷತೆಯನ್ನು ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ ಸಂಸ್ಥಾಪಕ ತೋನ್ಸೆ ಜಯಕೃಷ್ಣ ಎ ಶೆಟ್ಟಿ ವಹಿಸಲಿದ್ದಾರೆ. ಸಭೆಯಲ್ಲಿ ಸಮಿತಿಯ ಮುಂದಿನ ಕಾರ್ಯ ಯೋಜನೆಗಳು ಹಾಗೂ ಗಲ್ಫ್ ರಾಷ್ಟ್ರಗಳಲ್ಲಿ ಕೈಗೊಳ್ಳಲಿರುವ ಸಮಾಜಮುಖಿ ಚಟುವಟಿಕೆಗಳ ಕುರಿತು ಚರ್ಚೆ ನಡೆಯಲಿದೆ.












ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಖ್ಯಾತ ಉದ್ಯಮಿ ಪದ್ಮಶ್ರೀ ಡಾ. ಬಿ.ಆರ್ ಶೆಟ್ಟಿ, ಫಾರ್ಚೂನ್ ಗ್ರೂಪ್ ಆಫ್ ಹೋಟೆಲ್ಸ್ ನ ಸಿಎಂಡಿ ಪ್ರವೀಣ್ ಕುಮಾರ್ ಶೆಟ್ಟಿ, ಎನ್.ಆರ್.ಐ ಹಾಗೂ ಇನ್ಸ್ಟಿಟ್ಯೂಟ್ ಆಫ್ ಡೈರೆಕ್ಟರ್ಸ್ (ಇಂಡಿಯಾ ಗ್ಲೋಬಲ್)ನ ಡಿಸ್ಟಿಂಗ್ವಿಶ್ಡ್ ಫೆಲೋ ಡಾ| ರೊನಾಲ್ಡ್ ಕೊಲಾಸೊ ಹಾಗೂ ವಿಶ್ವ ದೇವಾಡಿಗ ಮಹಾಮಂಡಲದ ಅಧ್ಯಕ್ಷ ಧರ್ಮಪಾಲ ಯು ದೇವಾಡಿಗ ಪಾಲ್ಗೊಳ್ಳಲಿದ್ದಾರೆ. ಈ ಸಭೆಯಲ್ಲಿ ದುಬಾಯಿ ಮತ್ತು ಪರಿಸರದಲ್ಲಿರುವ ಕರಾವಳಿಯ ಹಾಗೂ ಎಲ್ಲಾ ತುಳು ಕನ್ನಡಿಗರು ಉಪಸ್ಥಿತರಿರಬೇಕಾಗಿ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ ಪರವಾಗಿ ಸಮಿತಿಯ ಯುಎಇ ಉಪಾಧ್ಯಕ್ಷ ಡಾ| ಡೇವಿಡ್ ಫ್ರಾಂಕ್ ಫೆರ್ನಾಂಡಿಸ್, ಯು.ಎ.ಇ ಸಂಚಾಲಕ ಸರ್ವೋತ್ತಮ ಶೆಟ್ಟಿ ಅಬುಧಾಬಿ, ಸಮಿತಿಯ ಗೌರವಾಧ್ಯಕ್ಷ ಪದ್ಮವಿಭೂಷಣ ಡಾ. ಬಿ.ಎಂ ಹೆಗ್ಡೆ, ಅಧ್ಯಕ್ಷ ನಿತ್ಯಾನಂದ ಡಿ ಕೋಟ್ಯಾನ್, ಜಿಲ್ಲಾ ಕಾರ್ಯಾಧ್ಯಕ್ಷ ಹರೀಶ್ ಕುಮಾರ್ ಎಂ.ಶೆಟ್ಟಿ, ಗೌರವ ಪ್ರಧಾನ ಕಾರ್ಯದರ್ಶಿ ಮುಂಡ್ಕೂರು ಸುರೇಂದ್ರ ಸಾಲ್ಯಾನ್, ಗೌರವ ಕೋಶಾಧಿಕಾರಿ ಸದಾನಂದ ಎನ್ ಆಚಾರ್ಯ, ರಾಜ್ಯ ಸಂಚಾಲಕ ಕೆ.ಪಿ ಜಗದೀಶ್ ಅಧಿಕಾರಿ, ಸಮಿತಿಯ ವಕ್ತಾರ ದಯಾಸಾಗರ ಚೌಟ, ಜಿಲ್ಲಾ ಸಮಿತಿಯ ಗೌರವ ಕಾರ್ಯದರ್ಶಿಗಳಾದ ಜಿ.ಟಿ ಆಚಾರ್ಯ ಮತ್ತು ಸುರೇಂದ್ರ ಮೆಂಡನ್, ಕೋಶಾಧಿಕಾರಿ ಪ್ರಭಾಕರ ಬಂಗೇರ ಕಾರ್ಕಳ, ಸಲಹೆಗಾರರು, ಮಾಜಿ ಅಧ್ಯಕ್ಷರುಗಳು, ಉಪಾಧ್ಯಕ್ಷರುಗಳು, ಕಾರ್ಯದರ್ಶಿಗಳು, ಪದಾಧಿಕಾರಿಗಳು ಮತ್ತು ಜಿಲ್ಲಾ ಸಮಿತಿಯ ಎಲ್ಲಾ ಪದಾಧಿಕಾರಿಗಳು ವಿನಂತಿಸಿದ್ದಾರೆ.






















































































































