ಇತಿಹಾಸದಲ್ಲೇ ಪ್ರಥಮ ಬಾರಿಗೆ ಬೆಂಗಳೂರಿನಲ್ಲಿ ‘ಶ್ರೀ ರಾಘವೇಂದ್ರ ಮಹಿಮೆ’ ಯಕ್ಷಗಾನ ಪ್ರಸಂಗವನ್ನು ಅದ್ಧೂರಿಯಾಗಿ ಆಯೋಜಿಸಲಾಯಿತು. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾನ್ಯ ನ್ಯಾಯಮೂರ್ತಿ ಶ್ರೀಶಾನಂದ, ಮಾನ್ಯ ನ್ಯಾಯಮೂರ್ತಿ ರಾಜೇಶ್ ರೈ ಕಲ್ಲಂಗಳ, ಮಾಜಿ ಉಪಮುಖ್ಯಮಂತ್ರಿ ಡಾ. ಸಿ.ಎನ್ ಅಶ್ವತ್ಥನಾರಾಯಣ ಹಾಗೂ ಉದ್ಯಮಿ ರಾಜೇಶ್ ಶೆಟ್ಟಿ, ಹೋಟೆಲ್ ಉದ್ಯಮಿ ಡಿ.ಬಿ ಪ್ರತಾಪ್ ಶೆಟ್ಟಿ ಅವರು ಉಪಸ್ಥಿತರಿದ್ದರು. ಮಂತ್ರಾಲಯದ ಪ್ರತಿನಿಧಿ ವೆಂಕಟೇಶ್ ಆಚಾರ್ಯ ಅವರ ಉಪಸ್ಥಿತಿಯಲ್ಲಿ, ಸ್ಪಂದನ ಟ್ರಸ್ಟ್ ಸೇವಾ ವತಿಯಿಂದ ಈ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಈ ಅದ್ಭುತ ಯಕ್ಷಗಾನ ಪ್ರಸಂಗವನ್ನು ಶಾಂತಾರಾಮ ಶೆಟ್ಟಿ ನಂದ್ರೊಳ್ಳಿ ಅವರು ರಚಿಸಿದ್ದಾರೆ. ಉದ್ಯಮಿ ರಾಜೇಶ್ ಶೆಟ್ಟಿ ಮಾತನಾಡಿ, ಶ್ರೀ ರಾಘವೇಂದ್ರ ಸ್ವಾಮಿಗಳ ಮಹಿಮೆಯನ್ನು ಯಕ್ಷಗಾನದ ಮೂಲಕ ಬೆಂಗಳೂರಿನಲ್ಲಿ ಪ್ರಸ್ತುತಪಡಿಸಿರುವುದು ನಿಜಕ್ಕೂ ಶ್ಲಾಘನೀಯ ಹಾಗೂ ಐತಿಹಾಸಿಕ ಕಾರ್ಯಕ್ರಮ ಎಂದರು.



















































































































