ಕುಂದಾಪುರದ ಡಾ. ಬಿ.ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಯುವ ರೆಡ್ಕ್ರಾಸ್ ಘಟಕದ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ ಆಗಸ್ಟ್ 20ರಂದು ಕಾಲೇಜಿನ ಎ.ವಿ ಹಾಲ್ನಲ್ಲಿ ನಡೆಯಿತು. ಇಂಡಿಯನ್ ರೆಡ್ಕ್ರಾಸ್ ಘಟಕದ ಸಭಾಪತಿಗಳಾದ ಜಯಕರ್ ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳು ಮಾನವೀಯ ಮೌಲ್ಯಗಳೊಂದಿಗೆ ಸೇವಾ ಮನೋಭಾವನೆಯನ್ನು ಬೆಳೆಸಿಕೊಳ್ಳಬೇಕು. ಕಾಲೇಜಿನ ರೆಡ್ಕ್ರಾಸ್ ಘಟಕ ಕ್ರಿಯಾಶೀಲವಾಗಿ ಕಾರ್ಯ ನಿರ್ವಹಿಸುತ್ತದೆ. ಘಟಕ ಹಮ್ಮಿಕೊಳ್ಳುವ ಸೇವಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಿ ಎಂದರು. ಇಂಡಿಯನ್ ರೆಡ್ ಕ್ರಾಸ್ ಸೊಸೈಟಿಯ ಕೋಶಾಧಿಕಾರಿ ಶಿವರಾಮ ಶೆಟ್ಟಿ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಡಾ| ಕೆ ಉಮೇಶ್ ಶೆಟ್ಟಿ ಅವರು ಸಮಾಜದ ಶ್ರೇಯೋಭಿವೃದ್ಧಿಯಲ್ಲಿ ಯುವ ರೆಡ್ಕ್ರಾಸ್ ಘಟಕದ ವಿದ್ಯಾರ್ಥಿಗಳು ಬೇರೆ ಬೇರೆ ಮಜಲುಗಳಲ್ಲಿ ಸೇವಾ ಭಾವನೆಯಿಂದ ಪಾಲ್ಗೊಳ್ಳಬೇಕು ಎಂದರು. ಇಂಡಿಯನ್ ರೆಡ್ಕ್ರಾಸ್ ಸೊಸೈಟಿಯ ಕಾರ್ಯದರ್ಶಿ ಸತ್ಯನಾರಾಯಣ ಪುರಾಣಿಕ್ ಉಪಸ್ಥಿತರಿದ್ದರು. ಕಾಲೇಜಿನ ಯುವ ರೆಡ್ಕ್ರಾಸ್ ಘಟಕದ ಸಂಯೋಜಕರಾದ ಯೋಗೀಶ್ ಶ್ಯಾನುಭೋಗ್ ಸ್ವಾಗತಿಸಿದರು. ವಾಣಿಜ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಪ್ರೀತಿ ಶೆಟ್ಟಿ ವಂದಿಸಿದರು. ವಿದ್ಯಾರ್ಥಿನಿ ಅನಘ ಪ್ರಾರ್ಥಿಸಿದರು. ಇದೇ ಸಂಧರ್ಭದಲ್ಲಿ ಕಳೆದ ಶೈಕ್ಷಣಿಕ ವರ್ಷದಲ್ಲಿ ರಾಜ್ಯ ಹಾಗೂ ವಿಶ್ವ ವಿದ್ಯಾಲಯ ಮಟ್ಟದ ವಿವಿಧ ಯುವ ರೆಡ್ ಕ್ರಾಸ್ ಘಟಕದ ಶಿಬಿರದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳನ್ನು ಗುರುತಿಸಿ ಗೌರವಿಸಲಾಯಿತು. ಸ್ವಯಂ ಸೇವಕಿ ಶಮಾ ಕಾರ್ಯಕ್ರಮ ನಿರೂಪಿಸಿದರು.


















































































































