ನಮ್ಮ ಕುಡ್ಲ, ನಮ್ಮ ಕಂಬಳ ಟೀಮ್, ಪಾಲೇಮಾರ್ ಗ್ರೂಪ್ ಆಯೋಜಿಸಿದ ನಮ್ಮ ಕಂಬಳ ಪ್ರಶಸ್ತಿ -2006 ಕಾರ್ಯಕ್ರಮದಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿಯವರು ಮುಖ್ಯ ಅತಿಥಿಯಾಗಿ ಭಾಗವಹಿಸಿದರು. ಈ ಸಂದರ್ಭದಲ್ಲಿ ಅವರನ್ನು ವಿಶೇಷವಾಗಿ ಗೌರವಿಸಲಾಯಿತು. ವೇದಿಕೆಯಲ್ಲಿ ಮೂಲ್ಕಿ ಅರಸರಾದ ದುಗ್ಗಣ್ಣ ಸಾವಂತರು, ಮಾಜಿ ಸಚಿವರಾದ ಜೆ ಕೃಷ್ಣ ಪಾಲೆಮಾರ್, ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಒಕ್ಕೂಟದ ನಿರ್ದೇಶಕ ಉದಯಕುಮಾರ್ ಶೆಟ್ಟಿ ಮುನಿಯಾಲು, ಕಾಂಗ್ರೆಸ್ ಮುಖಂಡ ಮಿಥುನ್ ಎಂ ರೈ, ಮಾಜಿ ಸಚಿವ ಬಿ ರಮಾನಾಥ ರೈ, ಉದ್ಯಮಿ ಸುರೇಶ್ ಶೆಟ್ಟಿ ಮಿಜಾರು, ಗುಣಪಾಲ ಕಡoಬ, ನಮ್ಮ ಕುಡ್ಲ ನಿರ್ದೇಶಕರಾದ ಲೀಲಾಕ್ಷ ಕರ್ಕೇರ, ಹರೀಶ್ ಕರ್ಕೇರ ಮತ್ತು ಕದ್ರಿ ನವನೀತ ಶೆಟ್ಟಿ ಉಪಸ್ಥಿತರಿದ್ದರು.


















































































































