ಅನಾರೋಗ್ಯದಿಂದ ಬಳಲುತ್ತಿದ್ದ ಸಂದರ್ಭದಲ್ಲಿ ಆರ್ಥಿಕ ಸಂಕಷ್ಟ ಎದುರಿಸುತ್ತಿರುವವರಿಗೆ ನೆರವು ನೀಡುವ ಉದ್ದೇಶದಿಂದ ಅಜಯ್ ದೀಕ್ಷಿತ್ ಶೆಟ್ಟಿ ಅವರು ಸಹಾಯಧನ ವಿತರಿಸಿದರು. ಸಂಕಷ್ಟದಲ್ಲಿ ಇರುವವರ ನೋವಿಗೆ ಸ್ಪಂದಿಸಿ ಅವರ ಚಿಕಿತ್ಸೆಗೆ ನೆರವಾಗುವ ನಿಟ್ಟಿನಲ್ಲಿ ಈ ಸಹಾಯವನ್ನು ನೀಡಲಾಗಿದೆ. ಈ ಸಂದರ್ಭದಲ್ಲಿ ಮಾತನಾಡಿದ ಅಜಯ್ ದೀಕ್ಷಿತ್ ಶೆಟ್ಟಿ ಅವರು, ಅನಾರೋಗ್ಯ ಹಾಗೂ ಸಂಕಷ್ಟದ ಸಮಯದಲ್ಲಿ ಸಾಧ್ಯವಾದಷ್ಟು ನೆರವು ನೀಡುವುದು ನಮ್ಮ ಸಾಮಾಜಿಕ ಜವಾಬ್ದಾರಿ. ಅಗತ್ಯವಿರುವವರೊಂದಿಗೆ ನಾವಿದ್ದೇವೆ ಎಂಬ ಭರವಸೆ ಮೂಡಿಸುವುದು ಮುಖ್ಯ ಎಂಬ ಆಶಯ ವ್ಯಕ್ತಪಡಿಸಿದರು.
ಸಹಾಯಧನ ಸ್ವೀಕರಿಸಿದವರು ಅಜಯ್ ದೀಕ್ಷಿತ್ ಶೆಟ್ಟಿ ಅವರಿಗೆ ಕೃತಜ್ಞತೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಬ್ಯಾಂಕಿನ ನಿರ್ದೇಶಕರಾದ ವಿದ್ಯಾನಂದ ಶೆಟ್ಟಿ, ಹಿಂದೂ ಜಾಗರಣ ವೇದಿಕೆ ತಾಲೂಕು ಸಹ ಸಂಯೋಜಕರಾದ ಶರತ್ ಮಿಜಾರ್, ಮಹೇಶ್ ನೀರ್ಕೆರೆ ಹಾಗೂ ಇನ್ನಿತರರು ಉಪಸ್ಥಿತರಿದ್ದರು. ಸಮಾಜದಲ್ಲಿ ಸಂಕಷ್ಟದಲ್ಲಿರುವವರ ನೆರವಿಗೆ ನಿಲ್ಲುವ ಇಂತಹ ಮಾನವಿಯ ಕಾರ್ಯಗಳು ಇತರರಿಗೂ ಪ್ರೇರಣೆಯಾಗಲಿ ಎಂಬ ಅಭಿಪ್ರಾಯ ಸಾರ್ವಜನಿಕರಿಂದ ವ್ಯಕ್ತವಾಗಿದೆ.


















































































































