ಬೆಳ್ವೆ ವ್ಯವಸಾಯ ಸೇವಾ ಸಹಕಾರಿ ಸಂಘದ 2024-25 ನೇ ಸಾಲಿನ ಗಣನೀಯ ಸೇವೆಯನ್ನು ಗುರುತಿಸಿ ರಾಜ್ಯ ಅಪೆಕ್ಸ್ ಬ್ಯಾಂಕ್ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಆಗಸ್ಟ್ 22 ರಂದು ಮಂಗಳೂರಿನಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ 2025 -26ನೇ ಸಾಲಿನ ವಾರ್ಷಿಕ ಮಹಾಸಭೆಯಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಯಿತು. ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಬ್ಯಾಂಕ್ ಅಧ್ಯಕ್ಷರಾದ ಡಾ| ಎಂ.ಎನ್ ರಾಜೇಂದ್ರ ಕುಮಾರ್ ಅವರು ಬೆಳ್ವೆ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ಎಸ್ ಜಯರಾಮ ಶೆಟ್ಟಿ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೀರ್ತಿ ಕುಮಾರ್ ಶೆಟ್ಟಿ ಅವರಿಗೆ ಪ್ರಶಸ್ತಿ ಪ್ರಧಾನ ಮಾಡಿದರು.


















































































































