ನೆಲ್ಯಾಡಿ ವಲಯ ಬಂಟರ ಸಂಘದ ನಿಕಟಪೂರ್ವ ಅಧ್ಯಕ್ಷರಾದ ಪ್ರತಾಪಚಂದ್ರ ರೈ ಕುದ್ಮಾರು ಗುತ್ತುರವರು ಪುತ್ತೂರು ತಾಲೂಕು ಬಂಟರ ಸಂಘದ ನೂತನ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಪ್ರಗತಿಪರ ಕೃಷಿಕರಾದ ಪ್ರತಾಪಚಂದ್ರ ರೈಯವರು ಕಾಂಚನ ಹಾಲು ಉತ್ಪಾದಕರ ಸಂಘದ ಸ್ಥಾಪಕ ಅಧ್ಯಕ್ಷರಾಗಿದ್ದು, ಪೆರ್ಲ ಸುಬ್ರಮಣ್ಯ ದೇವಸ್ಥಾನದ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಹಾಗೂ ಆದರ್ಶ ಯುವಕ ಸಂಘದ ಗೌರವಾಧ್ಯಕ್ಷರಾಗಿ ಸೇವೆ ಸಲ್ಲಿಸಿರುತ್ತಾರೆ.


















































































































