ಬಂಟರ ಸಂಘ (ರಿ) ಸುರತ್ಕಲ್ ಮಹಿಳಾ ವೇದಿಕೆ ವತಿಯಿಂದ ಆಗಸ್ಟ್ 28 ರಂದು ಶುಕ್ರವಾರ ಶ್ರೀ ವರಮಹಾಲಕ್ಷ್ಮಿ ಪೂಜೆ ಹಮ್ಮಿಕೊಳ್ಳಲಾಗಿದ್ದು, ಸುರತ್ಕಲ್ ಬಂಟರ ಭವನದಲ್ಲಿ ಸಂಜೆ 4 ಗಂಟೆಯಿಂದ ಶ್ರೀ ವರಮಹಾಲಕ್ಷ್ಮಿ ಪೂಜೆ ನಡೆಯಲಿದೆ. ಸುರತ್ಕಲ್ ಬಂಟರ ಸಂಘದ ಅಧ್ಯಕ್ಷರಾದ ಜಗನ್ನಾಥ ಶೆಟ್ಟಿ ಬಾಳ, ಮಹಿಳಾ ವೇದಿಕೆಯ ಅಧ್ಯಕ್ಷೆ ಸರೋಜ ಟಿ ಶೆಟ್ಟಿ ಉಪಸ್ಥಿತರಿರುವರು. ಮಹಿಳಾ ವೇದಿಕೆಯ ಭಜನಾ ತಂಡದ ಸದಸ್ಯೆಯರಿಂದ ಭಜನಾ ಕಾರ್ಯಕ್ರಮವು ನಡೆಯಲಿದ್ದು, ರಾತ್ರಿ 8 ಗಂಟೆಗೆ ಅನ್ನಸಂತರ್ಪಣೆ ನಡೆಯಲಿದೆ. ಭಗವತ್ಭಕ್ತರು ಶ್ರೀ ವರಮಹಾಲಕ್ಷ್ಮಿ ಪೂಜೆಗೆ ಆಗಮಿಸಿ ಶ್ರೀ ಮಹಾಲಕ್ಷ್ಮಿ ದೇವಿಯ ಕೃಪೆಗೆ ಪಾತ್ರರಾಗಬೇಕೆಂದು ಮಹಿಳಾ ವೇದಿಕೆಯ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸರ್ವ ಸದಸ್ಯರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


















































































































