ಬಂಟರ ಯಾನೆ ನಾಡವರ ಮಾತೃ ಸಂಘ ಮಂಗಳೂರು ತಾಲೂಕು ಸಮಿತಿ ವತಿಯಿಂದ ಎಜುಕೇಶನ್ ಎಕ್ಸಲೆನ್ಸಿ ಅವಾರ್ಡ್ ಪುರಸ್ಕಾರಕ್ಕೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಮಂಗಳೂರು ತಾಲೂಕು ವ್ಯಾಪ್ತಿಯಲ್ಲಿ ನೆಲೆಸಿರುವ ಬಂಟ ಸಮಾಜದ 2025 -26ರ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿ.ಯು.ಸಿಯಲ್ಲಿ ಶೇಕಡಾ 95 ಮತ್ತು ಅದಕ್ಕಿಂತ ಮೇಲ್ಪಟ್ಟು ಅಂಕ ಗಳಿಸಿದ ವಿದ್ಯಾರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಿದೆ. ಸ್ವಯಂ ಲಿಖಿತ ಅರ್ಜಿಯ ಜೊತೆ ಆಧಾರ್ ಕಾರ್ಡಿನ ಪ್ರತಿ ಮತ್ತು ಅಂಕಪಟ್ಟಿಯ ಪ್ರತಿ, ಇತ್ತೀಚಿನ ಭಾವಚಿತ್ರದೊಂದಿಗೆ ಸೆಪ್ಟೆಂಬರ್ 10 ರ ಒಳಗೆ ಬಂಟರ ಯಾನೆ ನಾಡವರ ಮಾತೃ ಸಂಘದ ಕಛೇರಿ, ಅಮೃತೋತ್ಸವ ಕಟ್ಟಡ, ಒಂದನೇ ಮಹಡಿ, ಬಂಟ್ಸ್ ಹಾಸ್ಟೆಲ್ ಮಂಗಳೂರು ಇಲ್ಲಿ ಸಲ್ಲಿಸಬೇಕಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ : 9480015895, 9480400994 ಸಂಪರ್ಕಿಸಬಹುದು ಎಂದು ತಾಲೂಕು ಸಮಿತಿ ಸಂಚಾಲಕ ದಿವಾಕರ ಸಾಮಾನಿ ಚೇಳ್ಯಾರು ಗುತ್ತು, ಸಹ ಸಂಚಾಲಕ ಆಶ್ವಾತ್ತಾಮ ಹೆಗ್ಡೆಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


















































































































