ಕಾವೂರು ಬಂಟರ ಸಂಘದ ಯುವ ವಿಭಾಗದ ನೂತನ ಪದಾಧಿಕಾರಿಗಳ ಆಯ್ಕೆ ಸಭೆಯು ಬಂಟರ ಸಂಘದ ಅಧ್ಯಕ್ಷರಾದ ಆನಂದ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಇತ್ತೀಚಿಗೆ ನಡೆದಿದ್ದು, ಯುವ ವಿಭಾಗದ ನೂತನ ಅಧ್ಯಕ್ಷರಾಗಿ ಯುವ ಉದ್ಯಮಿ ಸಾಕ್ಷಾತ್ ಶೆಟ್ಟಿಯವರು ಅವಿರೋಧವಾಗಿ ಆಯ್ಕೆಯಾದರು. ಗರುಡ ಎಂಟರ್ಪ್ರೈಸಸ್ ಸಂಸ್ಥೆಯ ಆಡಳಿತ ನಿರ್ದೇಶಕರಾಗಿರುವ ಸಾಕ್ಷಾತ್ ಶೆಟ್ಟಿಯವರು ಶಾಲಾ ಕಾಲೇಜು ದಿನಗಳಿಂದಲೇ ವಿದ್ಯಾರ್ಥಿ ನಾಯಕರಾಗಿ ಗುರುತಿಸಿಕೊಂಡು, ಪ್ರಸ್ತುತ ಹಲವಾರು ಸಂಘ ಸಂಸ್ಥೆಗಳಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿದ್ದಾರೆ.


















































































































