
ಕುಂದಾಪುರದ ಡಾ| ಬಿ.ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಹಿಂದಿ ವಿಭಾಗದ ಆಶ್ರಯದಲ್ಲಿ ‘ಓಣಂ’ ಆಚರಿಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಡಾ| ಕೆ. ಉಮೇಶ್ ಶೆಟ್ಟಿ ದೀಪ ಬೆಳಗಿಸಿ ಶುಭ ಹಾರೈಸಿದರು. ಈ ಸಂದರ್ಭ ಕಾಲೇಜಿನ ಉಪ ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ, ಆಡಳಿತ ನಿಕಾಯಕರಾದ ರಕ್ಷಿತ್ ರಾವ್ ಗುಜ್ಜಾಡಿ, ಕಾಲೇಜಿನ ಹಿಂದಿ ವಿಭಾಗದ ಮುಖ್ಯಸ್ಥೆ ಶ್ರೀಮತಿ ರೇವತಿ ಡಿ., ಸಹಾಯಕ ಪ್ರಾಧ್ಯಾಪಕಿ ಶ್ರೀಮತಿ ಸರೋಜ ಉಪಸ್ಥಿತರಿದ್ದು, ಬೋಧಕ ಬೋಧಕೇತರ ವೃಂದ, ವಿದ್ಯಾರ್ಥಿಗಳು ಹೂವಿನ ಪೂಕಳಂ ಹಾಕಿ ಸಾಂಪ್ರದಾಯಿಕ ಉಡುಗೆ ತೊಟ್ಟು ಸಂಭ್ರಮಿಸಿದರು.


















































































































